ರಾಯಚೂರು.13.ಆಗಸ್ಟ್.25:- ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ ಅವರು ಆಗಸ್ಟ್ 14ರಂದು ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಸಿಂಧನೂರು ನಗರದ ವಾರ್ಡ್ ನಂಬರ್ 23ರ ದೇವರಾಜ ಅರಸು ಮಾರುಕಟ್ಟೆಯಲ್ಲಿ ಅಖಿಲ ಕರ್ನಾಟಕ ಕುಳುವ ಮಹಾಸಂಘ, ಸಿಂಧನೂರು ತಾಲೂಕು ಕುಳುವ ಮಹಾಸಂಘ ಮತ್ತು ಇನ್ನಿತರ ಒಕ್ಕೂಟಗಳ ಸಹಯೋಗದಲ್ಲಿ ಸಿಂಧನೂರಿನಲ್ಲಿ ಹಮ್ಮಿಕೊಂಡ ಕಾಯಕಯೋಗಿ, ಶಿವಶರಣ ಶ್ರೀನುಲಿಯ ಚಂದಯ್ಯನವರ ಜಯಂತ್ಯೋತ್ಸವ ಹಾಗೂ ಶ್ರೀ ನುಲಿಯ ಚಂದಯ್ಯನವರ ಕಂಚಿನ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಮಧ್ಯಾಹ್ನ 3 ಗಂಟೆಗೆ ಸಿಂಧನೂರಿನ ಅಂಬೇಡ್ಕರ್ ನಗರದಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಕುಂದುಕೊರತೆಗಳನ್ನು ಆಲಿಸಲಿದ್ದಾರೆ.
ಸಿಂಧನೂರಿನ ವಾರ್ಡ್ ನಂಬರ್ 27ರ ಹಿರೇಲಿಂಗೇಶ್ವರ ಕಾಲೋನಿಯಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಬುಡ್ಗಜಂಗಮ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.
ಸಂಜೆ 4 ಗಂಟೆಗೆ ಸಿಂಧನೂರಿನ ಗಂಗಾನಗರದಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ ಮೇದಾ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಕುಂದು ಕೊರತೆಗಳನ್ನು ಆಲಿಸಿ ಸಂಜೆ 4.30ಕ್ಕೆ ಜಿಲ್ಲೆಯಿಂದ ನಿರ್ಗಮಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಬಿ.ಎಸ್.ಸುಹಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.