ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ’ ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಹಬ್ಬಿಸಿದ ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯ ವಿರುದ್ಧ ಗಲ್‌ಪೇಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಪಹಲ್ಗಾಮ್ ದಾಳಿ ಬಗ್ಗೆ ಕೇಂದ್ರದ ವಿರುದ್ಧ ಸುಳ್ಳು ಸುದ್ದಿ; ಕೋಲಾರದ ಮುನೀರ್ ಖಾನ್ ವಿರುದ್ಧ ಎಫ್‌ಐಆರ್.
ಮುನೀರ್ ಖಾನ್, ಚಿಕನ್ ಅಂಗಡಿಯ ಮಾಲೀಕನಾಗಿದ್ದು, ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ಪಹಲ್ಗಾಮ್ ದಾಳಿಯನ್ನು ಕೇಂದ್ರ ಸರ್ಕಾರದ ‘ಪೂರ್ವ ಯೋಜಿತ ಕೃತ್ಯ’ ಎಂದು ಬಿಂಬಿಸಿ, ‘ಬಿಹಾರ ಚುನಾವಣೆಯಲ್ಲಿ ಹಿಂದೂಗಳ ಮತ ಗಳಿಸಲು ಈ ದಾಳಿ ನಡೆಸಲಾಗಿದೆ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ್ದಾನೆ.
ಈ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲ, ಅಶಾಂತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದ್ದ ಕಾರಣ, ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೋಮು ಗಲಭೆ ತಡೆಗಟ್ಟಲು ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಲ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆಗೊಳಪಡಿಸಿದ್ದಾರೆ.
ರಾಯಚೂರು.05.ಆಗಸ್ಟ್.25: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ…
ರಾಯಚೂರು.05.ಆಗಸ್ಟ.25: ಇಲ್ಲಿನ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಕೌನ್ಸೆಲಿಂಗ್ ಪ್ರಕ್ರಿಯು ಆಗಸ್ಟ್ 11ರಿಂದ…
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…