ಬೆಂಗಳೂರು.25.ಏಪ್ರಿಲ್ .25:- ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಪಾಕಿಸ್ತಾನಿಯರು ಹೆಚ್ಚಾಗಿ ಆನ್‌ಲೈನ್ ಮೂಲಕ “ಪಹಲ್ಗಾಮ್ ದಾಳಿ” ಮತ್ತು “ಮೋದಿ” ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಇದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಉಂಟಾಗಿರುವ ಉದ್ವಿಗ್ನತೆಯ ಬಗ್ಗೆ ಅವರ ಕಳವಳಗಳನ್ನು ವ್ಯಕ್ತಪಡಿಸಿದೆ. ಪಾಕಿಸ್ತಾನಿಯರು ಹೆಚ್ಚಾಗಿ ಆನ್‌ಲೈನ್ ಮೂಲಕ “ಪಹಲ್ಗಾಮ್ ದಾಳಿ” ಮತ್ತು “ಮೋದಿ” ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಬಳಿಕ ವಿಶ್ವದಾದ್ಯಂತ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಪಾಕಿಸ್ತಾನವೂ ಸೇರಿದಂತೆ ಹಲವಾರು ದೇಶಗಳು ಇದರ ಬೆಳವಣಿಗೆಯ ಬಗ್ಗೆ ಭಾರತದತ್ತ ಕುತೂಹಲದಿಂದ ನೋಡುತ್ತಿದ್ದಾರೆ. ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನಕ್ಕೆ ಯಾವ ರೀತಿಯಲ್ಲಿ ಚಾಟಿ ಬೀಸುತ್ತದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಏನು ಮಾಡುತ್ತದೆ ಎನ್ನುವ ಕುತೂಹಲ ಈಗ ಎಲ್ಲರಲ್ಲೂ ಇದೆ.
ಪಹಲ್ಗಾಮ್ ದಾಳಿಯ ಬಳಿಕ ಆನ್‌ಲೈನ್ ನಲ್ಲಿ ಪರಿಸ್ಥಿತಿಯ ಬಗ್ಗೆ ಆಸಕ್ತಿ, ಕಳವಳ ಮತ್ತು ಊಹಾಪೋಹಗಳು ಹೆಚ್ಚಾಗಿವೆ. ಅಲ್ಲದೇ ಈ ದಾಳಿಯ ಬಳಿಕ ಪಾಕಿಸ್ತಾನದ ಇಂಟರ್ನೆಟ್ ಚಟುವಟಿಕೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಗೂಗಲ್ ಟ್ರೆಂಡ್ ಮಾಹಿತಿಯ ಪ್ರಕಾರ ಪಾಕಿಸ್ತಾನಿ ಬಳಕೆದಾರರು ಪಹಲ್ಗಾಮ್ ದಾಳಿ, ಕಾಶ್ಮೀರ ದಾಳಿ, ಸಿಂಧೂ ಜಲ ಒಪ್ಪಂದ, ಭಾರತೀಯ ವಾಯುಪಡೆ, ಮೋದಿ, ಭಾರತದ ಸೇಡು, ಜಮ್ಮು.. ಮೊದಲಾದವುಗಳನ್ನು ಹೆಚ್ಚಾಗಿ ಹುಡುಕಾಡಿದ್ದಾರೆ. ಅದರಲ್ಲೂ ಪಹಲ್ಗಾಮ್ ಎಂಬ ಕೀವರ್ಡ್ ಪಾಕಿಸ್ತಾನದಲ್ಲಿ ಅತಿ ಹೆಚ್ಚು ಹುಡುಕಿದ ಮೂರನೇ ಪದವಾಗಿದೆ.
ಇವು ಮಾತ್ರವಲ್ಲದೆ ಉಗ್ರರ ದಾಳಿಗೆ ಭಾರತದ ಪ್ರತಿಕ್ರಿಯೆ ಹೇಗಿರುತ್ತದೆ ಎಂಬುದನ್ನು ತಿಳಿಯಲು ಹೆಚ್ಚಿನವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಕುರಿತು ಜಾಲಾಡಿದ್ದಾರೆ. ಮೋದಿ ಪಹಲ್ಗಾಮ್ ಪ್ರತಿಕ್ರಿಯೆ ಮತ್ತು ಪಾಕಿಸ್ತಾನ ಸೇನೆಯ ಬಗ್ಗೆ ಭಾರತದ ಸುದ್ದಿ ಕುರಿತಾದ ಹುಡುಕಾಟಗಳೂ ನಡೆದಿವೆ.
ಇದು ಕೇವಲ ಗೂಗಲ್ ನಲ್ಲಿ ಮಾತ್ರ ನಡೆದಿಲ್ಲ, ಟ್ವಿಟ್ಟರ್, ಫೇಸ್ ಬುಕ್, ಯೂಟ್ಯೂಬ್ ನಲ್ಲೂ ಪಹಲ್ಗಾಮ್ ಟೆರರ್ ಅಟ್ಯಾಕ್, ಮೋದಿ ಹೆಸರಿನ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ. ಹೆಚ್ಚಿನ ಬಳಕೆದಾರರು ದಾಳಿಯ ಬಗ್ಗೆ ಮುಂದೆ ಏನಾಗಬಹುದು ಎನ್ನುವ ಕುತೂಹಲವನ್ನು ವ್ಯಕ್ತಪಡಿಸುತ್ತಿದ್ದಾರೆ.
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…