ಹೊಸ ದೆಹಲಿ.10.ಮೇ.25:- ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಸೇನಾ ಸಂಘರ್ಷ ತೀವ್ರಗೊಂಡಿದೆ. ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ತೀವ್ರ ಗುಂಡಿನ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಜೌರಿಯ ಅವರು ಮೃತಪಟ್ಟಿದ್ದು ಹಾಗೂ ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಜೌರಿ ನಗರದಲ್ಲಿರುವ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಪಾಕ್‌ನ ಶೆಲ್ ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ ಮತ್ತಿಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನೂ ರಾಜ್ ಕುಮಾರ್ ತಾಪ್ಪಾ ನಿಧನಕ್ಕೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ರಜೌರಿ ಪಟ್ಟಣವನ್ನು ಗುರಿಯಾಗಿಸಿ ಪಾಕ್ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಮೃತಪಟ್ಟಿದ್ದಾರೆ. ಈ ಘಟನೆ ಕುರಿತು ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಒಮರ್ ಅಬ್ದುಲ್ಲಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾವು ಸರ್ಕಾರದ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ರಾಜ್ ಕುಮಾರ್ ಅವರು ಉಪ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಿದ್ದರು. ಜತೆಗೆ, ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್ ಸಭೆಯಲ್ಲೂ ಭಾಗವಹಿಸಿದ್ದರು ಎಂದು ಒಮರ್ ಸ್ಮರಿಸಿದ್ದಾರೆ.
ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ರಾಜ್ ಕುಮಾರ್ ಥಪ್ಪಾ ಸಾವನ್ನಪ್ಪಿದ್ದಾರೆ. ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡ ನಂತರ ಈ ದಾಳಿ ನಡೆದಿದೆ. ಪಾಕಿಸ್ತಾನದ ಆಕ್ರಮಣವು ಈ ಪ್ರದೇಶದಲ್ಲಿ ಭಾರೀ ಶೆಲ್ ದಾಳಿ ಮತ್ತು ಡ್ರೋನ್ ದಾಳಿಗೆ ಕಾರಣವಾಗಿದೆ.
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…
ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…