ಪಾಕಿಸ್ತಾನ ಶೆಲ್‌ ದಾಳಿಗೆ ಜಮ್ಮುವಿನಲ್ಲಿ BSF ಯೋಧ ಹುತಾತ್ಮ ಜತೆಗೆ 7 ಮಂದಿ ಗಾಯಗೊಂಡಿದ್ದಾರೆ.

ಶ್ರೀನಗರ.11.ಮೇ.25:- ಪಾಕಿಸ್ತಾನದ ಅಪ್ರಚೋದಿನ ದಾಳಿಗೆ ಬಿಎಸ್‌ಎಸ್‌ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜತೆಗೆ 7 ಮಂದಿ ಗಾಯಗೊಂಡಿದ್ದಾರೆ. ಮೇ 10ರಂದು ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಸಮೀಪ ಪಾಕ್‌ ಶೆಲ್‌ ದಾಳಿ ನಡೆಸಿದ್ದು, ಬಿಎಸ್‌ಎಫ್‌ ಯೋಧ ಮೊಹಮ್ಮದ್‌ ಇಮ್ತಿಯಾಸ್‌ ವೀರ ಮರಣ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಮ್ಮುವಿನ ಆರ್‌.ಎಸ್‌.ಪುರ ಸೆಕ್ಟರ್‌ ಬಳಿ ಈ ದಾಳಿ ನಡೆದಿದೆ.ಪಾಕಿಸ್ತಾನದ ಅಪ್ರಚೋದಿನ ದಾಳಿಗೆ ಬಿಎಸ್‌ಎಸ್‌ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಮೇ 10ರಂದು ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ಸಮೀಪ ಪಾಕ್‌ ಶೆಲ್‌ ದಾಳಿ ನಡೆಸಿದ್ದು, ಬಿಎಸ್‌ಎಫ್‌ ಯೋಧ ಮೊಹಮ್ಮದ್‌ ಇಮ್ತಿಯಾಸ್‌ ವೀರ ಮರಣ ಹೊಂದಿದ್ದಾರೆ. ಗಾಯಗೊಂಡ ಬಿಎಸ್‌ಎಫ್‌ನ 7 ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ʼʼಸಬ್‌ ಇನ್ಸ್‌ಪೆಕ್ಟರ್‌ ಮೊಹಮ್ಮದ್‌ ಇಮ್ತಿಯಾಸ್‌ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆʼʼ ಎಂದು ಬಿಎಸ್‌ಎಫ್‌ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

https://x.com/bsf_jammu/status/1921210698123612181?ref_src=twsrc%5Etfw%7Ctwcamp%5Etweetembed%7Ctwterm%5E1921210698123612181%7Ctwgr%5E25264ec1cc9edc129d17be46f54cf08e1097de4b%7Ctwcon%5Es1_c10&ref_url=https%3A%2F%2Fvishwavani.news%2Fnational%2Fborder-force-trooper-killed-7-injured-in-pakistani-shelling-42584.html

ʼʼದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಬಿಎಸ್‌ಎಫ್‌ನ ಧೀರ ಯೋಧ ಸಬ್‌ ಇನ್ಸ್‌ಪೆಕ್ಟರ್‌ ಮೊಹಮ್ಮದ್‌ ಇಮ್ತಿಯಾಸ್‌ ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ. ಪಾಕಿಸ್ತಾನ ಅಪ್ರಚೋದಿನ ದಾಳಿ ವೇಳೆ ಅವರು ಮೇ 10ರಂದು ಹುತಾತ್ಮರಾಗಿದ್ದಾರೆ. ಅಂತಾರಾಷ್ಟ್ರೀಯ ಗಡಿ ಜಮ್ಮುವಿನ ಆರ್‌.ಎಸ್‌.ಪುರ ಸೆಕ್ಟರ್‌ ಬಳಿ ಈ ದಾಳಿ ನಡೆದಿದೆʼʼ ಎಂದು ಬಿಎಸ್‌ಎಫ್‌ ಎಕ್ಸ್‌ ಮೂಲಕ ತಿಳಿಸಿದೆ. ಇಮ್ತಿಯಾಸ್‌ ಅವರಿಗೆ ಮೇ 11ರಂದು ಅಂತಿಮ ಗೌರವ ಸಲ್ಲಿಸಲಾಗುತ್ತದೆ. ಗಾಯಗೊಂಡ ಇತರ ಬಿಎಸ್‌ಎಫ್‌ ಯೋಧರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF) ಭಾರತದ ಸುಮಾರು 2,000 ಕಿ.ಮೀ. ಉದ್ದದ ಗಡಿಯ ರಕ್ಷಣೆಯ ಜವಾಬ್ದಾರಿ ಹೊತ್ತುಕೊಂಡಿದೆ.

ಮೇ 10ರ ಸಂಜೆಯಷ್ಟೇ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ್ದ ಪಾಕಿಸ್ತಾನ ಸಂಜೆಯಾಗುತ್ತಿದ್ದಂತೆ ಉಲ್ಲಂಘಿಸಿದ್ದು, ಮತ್ತೆ ಭಾರತದತ್ತ ದಾಳಿ ಮುಂದುವರಿಸಿದೆ. ಗಡಿ ರಾಜ್ಯಗಳಾದ ಜಮ್ಮು ಕಾಶ್ಮೀರ, ಗುಜರಾತ್‌, ಪಂಜಾಬ್‌, ರಾಜಸ್ಥಾನಗಳಲ್ಲಿ ವಿವಿಧ ಕಡೆಗಳಲ್ಲಿ ಪಾಕ್‌ನ ಹಲವು ಡ್ರೋನ್‌ಗಳು ಕಂಡು ಬಂದಿದ್ದು, ಭಾರತೀಯ ಸೇನೆ ಹೊಡೆದುರುಳಿಸಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…

45 minutes ago

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

9 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

9 hours ago

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

9 hours ago

ಕರಾವಳಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಬಂದರು ಮಸೂದೆ, 2025 ಅನ್ನು ಲೋಕಸಭೆ ಅಂಗೀಕರಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…

9 hours ago

ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ₹4,594 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…

9 hours ago