ಪಾರಂಪರಿಕ ವೈದ್ಯರು ಸದಾ ಶೋಧನೆ ಮಾಡುತ್ತಿರಬೇಕು: ಡಾ.ವಿ.ಪಿ.ಸಿಂಗ್

ಬೀದರ.03.ಮಾರ್ಚ.25:-ಪಾರಂಪರಿಕ ವೈದ್ಯ ಪದ್ಧತಿಗೆ ಭಾರತದಲ್ಲಿ ತನ್ನದೇ ಆದ ಶ್ರೀಮಂತ ಇತಿಹಾಸವಿದೆ. ವೈದ್ಯರು ಸದಾ ಶೋಧನೆ ಮಾಡುತ್ತ ಜನತೆಗೆ ಉತ್ತಮ ಚಿಕಿತ್ಸೆ ನೀಡಬೇಕೆಂದು ತೋಟಗಾರಿಕಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ವಿ.ಪಿ.ಸಿಂಗ್ ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಬೆಂಗಳೂರು, ಪಾರಂಪರಿಕ ವೈದ್ಯ ಪರಿಷತ್ತು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತು ಲಿಂಗಸುಗೂರು ಇವರ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ನಡೆಯುತ್ತಿರುವ 15ನೇ ಪಾರಂಪರಿಕ ವೈದ್ಯ ಸಮ್ಮೇಳನದ ಮೂರನೇ ಗೋಷ್ಠಿ “ಔಷಧಿ ಸಸ್ಯಗಳನ್ನು ಬೆಳೆಸುವುದು ಮತ್ತು ಮಾರಾಟ ಮಾಡುವುದು ಹಾಗೂ ಔಷಧಿ ಸಸ್ಯಗಳ ಸಂರಕ್ಷಣೆ” ಗೋಷ್ಠಿ ಉದ್ದೇಶಿಸಿ ಮಾತನಾಡಿದರು.


ಔಷಧೀಯ ಸಸ್ಯಗಳನ್ನು ಬೆಳೆಸುವುದು ಮತ್ತು ಮಾರಾಟ ಮಾಡುವುದರ ಜೊತೆಗೆ ಅವುಗಳನ್ನು ಸಂರಕ್ಷಣೆ ಮಾಡಬೇಕಾದ ಅವಶ್ಯಕತೆ ಇದೆ. ಸದ್ಯ ಪಾರಂಪರಿಕ ಔಷಧ ಕ್ಷೇತ್ರ ಒಟ್ಟು 55 ಬಿಲಿಯನ್ ಡಾಲರ್ ವ್ಯವಹಾರ ಮಾಡುತ್ತಿದೆ. ನಾಟಿ ವೈದ್ಯರು ಹೊಸ ಹೊಸ ಸಸ್ಯಗಳಾದ ಅಶ್ವಗಂಧ, ಮುಸ್ಲಿಗಿಡ, ನಾಗದಾಲಿ ಗಿಡ, ಭೋಮಿ ಆವ್ಲಾ ಇವುಗಳ ಉಪಯೋಗ ಅರಿತು ಜನತೆಗೆ ಚಿಕಿತ್ಸೆ ನೀಡಬೇಕು. ಸದಾ ಸಂಶೋಧನಾ ಶೀಲರಾಗಿ ರಾಜ್ಯದ ಪಾರಂಪರಿಕ ವೈದ್ಯರೊಂದಿಗೆ ಸಂಪರ್ಕ ಸಾಧಿಸಿ ಉತ್ತಮ ವೈದ್ಯರಾಗಿ ಹೊರಹೊಮ್ಮಬೇಕೆಂದು ತಿಳಿಸಿದರು. ಹಲವು ದೀರ್ಘಕಾಲಿಕ ಕಾಯಿಲೆಗಳನ್ನು ಹೊಡೆದೋಡಿಸುವ ಶಕ್ತಿ ಆಯುರ್ವೇದಕ್ಕಿದೆ ಎಂದು ಡಬ್ಲೂ.ಎಚ್.ಓ. ಹೇಳಿದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಎನ್.ಕೆ.ಜಾಬಶೆಟ್ಟಿ ಆಯುರ್ವೇದ ಮೆಡಿಕಲ್ ಕಾಲೇಜಿನ ಉಪನ್ಯಾಸಕ ಡಾ. ಧೂಳಪ್ಪ ಮಾತನಾಡಿ ಔಷಧ ಇಲ್ಲದ ಸಸ್ಯಗಳೇ ಇಲ್ಲ. ಅದನ್ನು ಯುಕ್ತಿಯಿಂದ ಬಳಸಿಕೊಳ್ಳುವ ಜಾಣ್ಮೆ ಪಾರಂಪರಿಕ ವೈದ್ಯರಲ್ಲಿ ಇರಬೇಕು. ತನ್ಮೂಲಕ ಆಯುರ್ವೇದಕ್ಕೆ ವೈಜ್ಞಾನಿಕ ಪರಿವರ್ತನೆ ಕೊಡಬಹುದು. ಜೀವ ಸಂರಕ್ಷಕ ಔಷಧಿಗಳನ್ನು ತಯಾರಿಸುವ ಚಾಕಚಕ್ಯತೆ ವೈದ್ಯರಲ್ಲಿ ಇರಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಉಪನಿರ್ದೇಶಕಿ ಡಾ. ಪವಿತ್ರಾ ಪ್ರಾಸ್ತಾವಿಕವಾಗಿ ಮಾತನಾಡಿದರು.


ಈ ಸಂದರ್ಭದಲ್ಲಿ ಪಾರಂಪರಿಕ ವೈದ್ಯ ಪರಿಷತ್ತು ಬೆಂಗಳೂರಿನ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ, ದಿನಕರರಾವ ಕುಲಕರ್ಣಿ ಕಲಬುರಗಿ, ವಿಶ್ವನಾಥ ವೈದ್ಯ ಉಡುಪಿ, ರಮೇಶ ಮಹೇಂದ್ರಕರ್ ಕಲಬುರಗಿ, ಪ್ರಕಾಶ ಬೀಳೂರ, ವಿರೂಪಾಕ್ಷ ಕೋಡಿಹಾಳ ಸೇರಿದಂತೆ ಹಲವರಿದ್ದರು. ಸುಭಾಷ ನೇಳಗೆ ನಿರೂಪಿಸಿದರು. ವೈಜಿನಾಥ ಪಾಟೀಲ ಸ್ವಾಗತಿಸಿದರು. ಡಾ. ರಾಜಕುಮಾರ ಹೆಬ್ಬಾಳೆ ವಂದಿಸಿದರು.

ಸರ್ಕಾರ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆಯುರ್ವೇದ ಕ್ಯಾನ್ಸರ್
ಚಿಕಿತ್ಸಾ ಕೇಂದ್ರ ಆರಂಭಿಸಲಿ-ಡಾ. ಡಿ.ಪಿ.ರಮೇಶ

prajaprabhat

Recent Posts

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು

ಬೆಂಗಳೂರು.12.ಆಗಸ್ಟ್.25: ರಾಜ್ಯಾದ್ಯಂತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ "ಅರಣ್ಯ ವೀಕ್ಷಕ" ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್…

11 minutes ago

ವಸತಿಯುಕ್ತ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ ಹುದ್ದೆಗಳು…

4 hours ago

ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ PH.D ಪ್ರಮಾಣಪತ್ರ

ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…

8 hours ago

ವಿಶೇಷಚೇತನ ಅತಿಥಿ ಉಪನ್ಯಾಸಕರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳ ಸರ್ಕಾರ ಗಮನ ಸೆಳೆಲೀ..

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…

8 hours ago

Free ಉಚಿತ ‘ಮೊಬೈಲ್ ರಿಪೇರಿ’ ತರಬೇತಿಗಾಗಿ ಅರ್ಜಿ ಆಹ್ವಾನ

ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌…

10 hours ago

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

12 hours ago