====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೀದರ.06.ಮಾರ್ಚ.25: – ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪಾಶ್ಚ) Posch ಗಳನ್ನು ಜಿಲ್ಲೆಯ ಎಲ್ಲ ಸರಕಾರಿ ಅರೆ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸ್ಥಾಪಿಸಿ ಈ ಕುರಿತು ಜನಜಾಗೃತಿ ಮೂಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಜಿಲ್ಲಾದಿಕಾರಿಗಳ ಸಭಾಂಗಣದಲ್ಲಿoದು ಜರುಗಿದ ಮಹಿಳೆಯರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, 10 ಜನಕ್ಕಿಂತ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ಪಾಶ್ಚ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕೆಂದು ಅವರು ತಿಳಿಸಿದರು.
ಈ ಕುರಿತಂತೆ ಈಗಾಗಲೇ ಸುಪ್ರಿಂ ಕೋರ್ಟ ಹಾಗೂ ಹೈಕೋರ್ಟ ಆದೇಶವಿದೆ. ಎಲ್ಲ ಸ್ಥಳಗಳಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿಗಳನ್ನು ಸ್ಥಾಪಿಸುವುದರಿಂದ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆ ಹಿಡಿಯಬಹುದಾಗಿದೆ. ಈ ಕುರಿತು ಹೆಚ್ಚು ಪ್ರಚಾರ ಆಂದೋಲಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಧಿಕಾರಿಗಳಿಗೆ ಸೂಚಿಸಿದರು.
ತಾವು ಔರಾದನಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಗೈರುಹಾಜರಾದ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಳಿಗೆ ತರಾಟೆಗೆ ತೆಗೆದುಕೆಂಡ ಡಾ.ನಾಗಲಕ್ಷ್ಮೀ ಔರಾದನಲ್ಲಿ ್ಲ ಅಲೆಮಾರಿ ಜನಾಂಗವು ತೀರ ಅಸಾಹನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅವರ ಅಭಿವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಔರಾದ್‌ನ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಉತ್ತಮ ಆಹಾರ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದರು. ಕಳೆದ 40 ವರ್ಷಗಳಿಂದ ಔರಾದ್ ನಗರದಿಂದ 8 ಕಿ.ಮೀ. ದೂರದಲ್ಲಿರುವ ಅಲೆಮಾರಿ ಸಮುದಾಯದವರಿಗೆ ಶಿಕ್ಷಣ, ಆರೋಗ್ಯ ಹಾಗೂ ಸಂಪರ್ಕಕ್ಕೆ ಅನುಕೂಲವಾಗುವಂತೆ ನಗರದ ಹಜತ್ತಿರದಲ್ಲಿ ಭೂಮಿ ಒದಗಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರೊಂದಿಗೆ ಚರ್ಚಿಸಿದರು. ಔರಾದ್‌ನ ತಾಲ್ಲೂಕ ಆಸ್ಪತ್ರೆಯ ಕುಡಿಯುವ ನೀರಿನ ಟ್ಯಾಂಕ್ ತೆರೆದಿದ್ದು ಹುಳಗಳು ಕಂಡುಬoದಿದ್ದನ್ನು ಸರಿಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ಇಲಾಖೆಗಳ ಬಾಲಕಿಯರ ವಸತಿ ನಿಲಯಗಳ ನಿರ್ವಹಣೆ ಬಗ್ಗೆ ವರದಿ ನೀಡುವಂತೆ ಸಂಬoಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಆಹಾರ, ಆರೋಗ್ಯ, ಸ್ವಚ್ಛತೆ, ಭದ್ರತಾ ವ್ಯವಸ್ಥೆ ಕುರಿತು ಒಂದು ವಾರದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿಂಧು ಎಸ್., ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಬ್ರಿಮ್ಸ್ ನಿರ್ದೇಶಕರಾದ ಶಿವಕುಮಾರ ಶೆಟಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜ್ಞಾನೇಶ್ವರ ನಿರುಗಡೆ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…