ಬೀದರ, ಜನವರಿ.06:- ಜಿಲ್ಲೆಯನ್ನು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಭಾಗೀತ್ವದಲ್ಲಿ 15 ಸಾವಿರ ಮನೆಗಳು ಮಂಜೂರಾಗಿದ್ದು, ಯಾರಿಗೆ ಮನೆ ಮತ್ತು ನಿವೇಶನವಿಲ್ಲ ಅಂತಹವರಿಗೆ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದು ಬೀದರ ಸಂಸದರಾದ ಸಾಗರ ಈಶ್ವರ ಖಂಡ್ರೆ ತಿಳಿಸಿದರು.
ಇಂದು ಸೋಮವಾರ ಭಾಲ್ಕಿಯ ಸಂಸದರ ಕಚೇರಿ ಆವರಣದಲ್ಲಿ ಭಾಲ್ಕಿ ತಾಲ್ಲೂಕಿನ ಗ್ರಾಮೀಣ ಭಾಗದ 665 ಜನರಿಗೆ 2024-25ನೇ ಸಾಲಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಿಂದ ಪಿ.ಎಂ.ಎ.ವಾಯ್ (ಜಿ) ಅಡಿಯಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ತಿಳುವಳಿಕೆ ಪತ್ರ ವಿತರಣೆ ಮಾಡಿ ಮಾತನಾಡಿದರು.
ಸಾಮಾನ್ಯ ಜನರಿಗೆ ಮೊದಲನೆ ಕಂತಿನಲ್ಲಿ 30 ಸಾವಿರ ರೂ, ಎರಡನೇ ಕಂತಿನದಲ್ಲಿ 60 ಸಾವಿರ ರೂ, ಮೂರನೇ ಕಂತಿನಲ್ಲಿ 30 ಸಾವಿರ ರೂ. ಒಟ್ಟು 1,20,000 ರೂ. ಹಣ ಸಂಬoಧಿಸಿದ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುವುದು. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮೊದಲನೇ ಕಂತಿನಲ್ಲಿ 43,750 ರೂ., ಎರಡನೇ ಕಂತಿನಲ್ಲಿ 87,500 ರೂ., ಮೂರನೇ ಕಂತಿನಲ್ಲಿ 43,750 ರೂ. ಸಂಬAಧಿಸಿದ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು.
ಮಧ್ಯವರ್ತಿಗಳ ನಂಬಬೇಡಿ, ಅನುದಾನವು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಆಗಲಿದೆ. ಮೊದಲ ಕಂತು ಜಮೆಯಾದ ತಕ್ಷಣವೇ ಮನೆ ಕಾಮಗಾರಿ ಆರಂಭಿಸತಕ್ಕದ್ದು ಎಂದರು.
ಭಾಲ್ಕಿ ತಾಲ್ಲೂಕಿನ ಗ್ರಾಮಾಂತರ ವ್ಯಾಪ್ತಿಗೆ ಒಟ್ಟು 3 ಸಾವಿರ ಮನೆ ಮಂಜೂರಾಗಿದ್ದು, ಈ ಪೈಕಿ ಮೊದಲ ಹಂತದ 665 ಫಲಾನುಭವಿಗಳಿಗೆ ಇಂದು ತಿಳುವಳಿಕೆ ಪತ್ರ ನೀಡಲಾಗುತ್ತಿದೆ ಎಂದರು. ಅದೇ ರೀತಿ ಗ್ರಾಮೀಣ ಭಾಗದಲ್ಲಿ ಇನ್ನೂ ವಸತಿ ರಹಿತರ ಗುರುತಿಸುವಿಕೆ ಕಾರ್ಯ ನಡೆಯುತ್ತಿದ್ದು, ಅಂತವರಿಗೆ ಮುಂದಿನ ಸಮಯದಲ್ಲಿ ಮನೆಗಳನ್ನು ಮಂಜೂರು ಮಾಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿವಾರು ಫಲಾನುಭವಿಗಳಿಗೆ ತಿಳುವಳಿಕೆ ಪ್ರಮಾಣ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…