ಬೀದರ.25.ಜನವರಿ.26:- ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೊಂದಾಯಿಸಲು ಜನವರಿ.15 ರಿಂದ ಮಾರ್ಚ.15 ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸ ಬಹುದಾಗಿದೆ. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ.ವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಸದರಿ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ರೂ.3000 ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್‍ಎಚ್‍ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು, ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಬೀದರ ಉಪ ಬೀದರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಬೀದರ ಅಥವಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.






Any questions related to ಪಿಎಂಎಸ್‍ವೈಎಂ ಯೋಜನೆ ವಿಶೇóಷ ನೋಂದಣಿ ಅಭಿಯಾನ?