Home » ಲೈವ್ ನ್ಯೂಸ್ » ಪಿಎಚ್.ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

ಪಿಎಚ್.ಡಿ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.26.ಡಿಸೆಂಬರ್.25: 2025-26 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ: 26/12/2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ, ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2025-26 ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ, ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನವಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ರೂ.4.50 ಲಕ್ಷ, ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.3.50 ಲಕ್ಷ ಇರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.

ಅಭ್ಯರ್ಥಿಗಳು ಪೂರ್ಣಾವಧಿ ಪಿ.ಎಚ್‌ಡಿ ಅಧ್ಯಯನಕ್ಕಾಗಿ ಮಾಡಿಸುವ ನೋಂದಣಿ ದಿನಾಂಕವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ವ್ಯಾಸಂಗ  ವೇತನ, ಫೆಲೋಶಿಫ್‌ಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸುವ ಕೊನೆಯ ದಿನಾಂಕಕ್ಕೆ ಹಿಂದಿನ 2 ವರ್ಷದೊಳಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಾಲಿನಿಂದ ಪ್ರಥಮ ವರ್ಷದ ಪಿ.ಎಚ್‌ಡಿ ಅಧ್ಯಯನದಲ್ಲಿ ತೊಡಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್  https://bcwd.karnataka.gov.in     ವೀಕ್ಷಿಸಬಹುದು. ಸಹಾಯವಾಣಿ ಸಂಖ್ಯೆ: 8050770004 (ಕಛೇರಿ ಕಾರ್ಯನಿರ್ವಹಿಸುವ ಸಮಯ ಬೆಳಿಗ್ಗೆ 10.00 ರಿಂದ ಸಂಜೆ 5.30 ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ) ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology