02/08/2025 2:33 AM

Translate Language

Home » ಲೈವ್ ನ್ಯೂಸ್ » ಪೂರ್ವಭಾವಿ ಸಿದ್ಧತಾ ಸಭೆ

ಪೂರ್ವಭಾವಿ ಸಿದ್ಧತಾ ಸಭೆ

Facebook
X
WhatsApp
Telegram

ಶ್ರೀ ನುಲಿಯ ಚಂದಯ್ಯ ಜಯಂತಿ ಅರ್ಥಪೂರ್ಣ ಆಚರಣೆಯಾಗಲಿ: ಅಪರ ಜಿಲ್ಲಾಧಿಕಾರಿ ಶಿವಾನಂದ ಸೂಚನೆ


ರಾಯಚೂರು.31.ಜುಲೈ.25: ಜಿಲ್ಲಾಡಳಿತದಿಂದ ಆಗಸ್ಟ್ 9ರಂದು ಶ್ರೀ ನುಲಿಯ ಚಂದಯ್ಯ ಅವರ  ಜಯಂತ್ಯುತ್ಸವವನ್ನು ಅರ್ಥಪೂರ್ಣಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜುಲೈ 30ರ ಬುಧವಾರ  ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯುತ್ಸವ ಅಂಗವಾಗಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಅಂದು ಬೆಳಿಗ್ಗ 9 ಗಂಟೆಗೆ ನಗರದ ಟಿಪ್ಪು ಸುಲ್ತಾನ ಸರ್ಕಲ್‌ನಿಂದ ರಂಗಮಂದಿರವರೆಗೂ ನಡೆಯಲಿರುವ ಮೆರವಣಿಗೆಯಲ್ಲಿ ಅತ್ಯುತ್ತಮ ಕಲಾ ಪ್ರದರ್ಶನ ನೀಡುವ ತಂಡಗಳನ್ನು ನಿಯೋಜಿಸಬೇಕು. ಅಂದು ಬೆಳಿಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮಕ್ಕೆ ಮತ್ತು ಶ್ರೀ ನುಲಿಯ ಚಂದಯ್ಯ ಅವರ ಬಗ್ಗೆ ಉಪನ್ಯಾಸ ಹಾಗೂ ಇನ್ನೀತರ ವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.


ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಕಡ್ಡಾಯ ಆಚರಿಸಿ ಅವರ ವಚನಾಮೃತದ ಸಾರವನ್ನು ಸಾರ್ವಜನಿಕರಿಗೆ ತಿಳಿಸಲು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು. ಅಲ್ಲದೆ ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಅಂದು ರಂಗಮಂದಿರದ ಆವರಣದಲ್ಲಿ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಏರ್ಪಾಡು ಮಾಡಬೇಕು. ನಗರದ ಮುಖ್ಯ ರಸ್ತೆಗಳು ಮತ್ತು ಆವರಣದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಕಾರ್ಯಕ್ರಮ ಯಶಸ್ಸಿಗೆ ಸಕಲ ಸಿದ್ಧತೆ ಮಾಡಲು ಇಲಾಖಾವಾರು ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು. ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.


ಸಮಾಜದ ಮುಖಂಡರ ಸಲಹೆ: ವೇದಿಕೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಶ್ರೀ ನುಲಿಯ ಚಂದಯ್ಯ ಅವರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಬೇಕು ಎಂದು ಇದೆ ವೇಳೆ ಸಮಾಜದ ಬಂಧುಗಳು ಮನವಿ ಮಾಡಿದರು.


ಇದೇ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ, ಸಮಾಜದ ಮುಖಂಡರಾದ ನರಸಿಂಹಲು ಕಮಲಪೂರ, ಮಾಲಾ ಎಸ್. ಭಜಂತ್ರಿ, ಆಂಜನೇಯ, ರಾಮಕೃಷ್ಣ ಭಜಂತ್ರಿ, ಗಂಗಣ್ಣ ಕರವೇ, ದುರುಗರಾಜ್, ನಂದಪ್ಪ ಮಡ್ಡಿ ಲಿಂಗದಹಳ್ಳಿ, ಬೂದೆಪ್ಪ, ನರಸಿಂಹಲು ಬ್ರೂಸ್ಲಿ, ರಮೇಶ ಭಜಂತ್ರಿ, ಈರಣ್ಣ ಸೇರಿದಂತೆ ಇನ್ನೀತರರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆಯಲ್ಲಿ ಇದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!