ರಾಜ್ಯ ಸರ್ಕಾರ ಕೆಲ ದಿನಗಳಿಂದ ಐಪಿಎಸ್ – ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಬಲಪಡಿಸುವ ಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇಂದು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಬದಲಾವಣೆ ಮಾಡಲಾಗಿದ್ದು, 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಹಲವು ವರ್ಷಗಳಿಂದ ಒಂದೇ ಕಡೆ ತಳ ಊರಿದ್ದ ಸಿಬ್ಬಂದಿಗಳ ಸ್ಥಳಾಂತರ ಮಾಡಲಾಗಿದೆ. ಕೆಲ ವಾರಗಳ ಹಿಂದೆ ಕರಾವಳಿಯಲ್ಲಿ ದೊಡ್ಡ ಸದ್ದು ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಶೀದ್ ಶೇಕ್ ಕೂಡ ವರ್ಗಾವಣೆಯಾಗಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹಂತಕರ ಜೊತೆ ಪೊಲೀಸ್ ರಶೀದ್ ಶಾಮೀಲಾಗಿದ್ದರು ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಇದೀಗ ರಶೀದ್ ಅವರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಸಿ.ಸಿ.ಬಿ, ಸೆನ್ ಸೇರಿದಂತೆ ಕಮಿಷನರೇಟ್ ಪ್ರದೇಶಕ್ಕೆ ಒಳಪಡುವ ಠಾಣೆಗಳ ಹಲವು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.
ಇಲ್ಲಿದೆ ವರ್ಗಾವಣೆಯಾದ ಪೊಲೀಸ್ ಸಿಬ್ಬಂದಿಗಳ ವಿವರ
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…