ಬೀದರ.02.ಏಪ್ರಿಲ್.25: ಪೊಲೀಸ್ ಇಲಾಖೆಯು ಪವಿತ್ರವಾದ ಇಲಾಖೆಯಾಗಿದ್ದು, ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ತಮ್ಮ ಸಮವಸ್ತçಕ್ಕೆ ಗೌರವ ನೀಡಬೇಕು ಎಂದು ನಿವೃತ್ತ ಪಿಎಸ್‌ಐ ಘನಶ್ಯಾಮ ಹೇಳಿದರು.
ಅವರು ಬುಧವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪರೇಡ್ ವಂದನೆ ಸ್ವೀಕರಿಸಿ ಮಾತನಾಡಿದರು.
ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ತಮ್ಮ ಕರ್ತವ್ಯದ ಜೊತೆಗೆ ಆರೋಗ್ಯದ ಕಡೆಗೂ ಗಮನ ನೀಡಬೇಕು. ಕುಟುಂಬದ ಸದಸ್ಯರಿಗೂ ಸಮಯ ನೀಡಬೇಕು. ಇತ್ತೀಚಿಗೆ ಇಲಾಖೆ ಸಾಕಷ್ಟು ಬದಲಾವಣೆ ಕಂಡಿದೆ. ಈ ಹಿಂದೆ ಪಿಎಸ್‌ಐ ಬಳಿ ಮಾತ್ರ ವಾಕಿ ಟಾಕಿ ಇರುತ್ತಿತ್ತು ಅವರೇ ಎಲ್ಲದರ ಮಾಹಿತಿ ನೀಡುತ್ತಿದ್ದರು. ಸೈಕಲ್ ಮೇಲೆ ಬಿಟ್ ಡ್ಯೂಟಿ ಮಾಡಬೇಕಿತ್ತು ಆದರೆ ಈಗ ಆ ವ್ಯವಸ್ಥೆ ಬದಲಾಗಿದೆ ಎಂದು ತಮ್ಮ ಸೇವಾ ದಿನಗಳನ್ನು ಮೆಲಕು ಹಾಕಿದ್ದರು.
ಇದೇ ಸಂದರ್ಭದಲ್ಲಿ ಅವರು ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಸಿಗುವಂತೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಮಾತನಾಡಿ, ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗಾಗಿ ಗೆಸ್ಟ್ ಹೌಸ್, ಟೆನಿಸ್ ಕೋಟ್, ಕ್ರಿಕೆಟ್ ಗ್ರೌಂಡ್, ಹೆಲ್ತ್ ಕಾರ್ಡ್, ಪೊಲೀಸ್ ಲೈಬ್ರರಿ, ಡಿಜಿಟಲ್ ಲೈಬ್ರರಿ, ಶಾಲಾ -ಕಾಲೇಜುಗಳಲ್ಲಿ ಹೆಚ್ಚು ಅಂಕಗಳಿಸಿದ ಪೊಲೀಸ್ ಸಿಬ್ಬಂದಿಗಳ ಮಕ್ಕಳಿಗೆ ಬಹುಮಾನ ವಿತರಣೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇoರಿದಂತೆ ಹತ್ತು ಹಲವಾರು ಸೌಲಭ್ಯಗನ್ನು ನೀಡಲಾಗುತ್ತಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೌಲಭ್ಯ ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಚಂದ್ರಕಾAತ ಪೂಜಾರಿ, ಬೀದರ ಡಿವೈಎಸ್ಪಿ ಶಿವನಗೌಡ ಪಾಟೀಲ್, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಬಸವಕಲ್ಯಾಣ ಸಿಪಿಐ ಅಲಿಸಾಬ, ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿದಂತೆ ನಗರದ ಗಣ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…