ಬೆಂಗಳೂರು.13.ಜೂನ್.25:- ರಾಜ್ಯದ ಡಿಸಿಆರ್‌ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು ತನಿಖೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಅಧಿಸೂಚನೆಯಲ್ಲಿ ರಾಜ್ಯಾದ್ಯಂತ ಒಟ್ಟು 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ.
ಸದರಿ ಅಧಸೂಚನೆಯಲ್ಲಿ ನಮೂದಿಸಿರುವ ಕಾಯಿದೆಗಳಡಿ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳನ್ನು ಮುಂದಿನ ತನಿಖೆಗಾಗಿ ಡಿ.ಸಿ.ಆರ್.ಇ ಪೊಲೀಸ್ ಠಾಣೆಗಳಿಗೆ ಉಲ್ಲೇಖಿತ (2)ರ ಸರ್ಕಾರದ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳನ್ವಯ ವರ್ಗಾಯಿಸಲು ಸೂಚಿಸಲಾಗಿದೆ.
ಉಲ್ಲೇಖಿತ (2)ರ ಸರ್ಕಾರಿ ಆದೇಶದನ್ವಯ. ದಿನಾಂಕ:14.04.2025 ರಿಂದ ಅನ್ವಯವಾಗುವಂತೆ 33 ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯಾಗತಗೊಳಿಸಲಾಗಿರುತ್ತದೆ. ಆದರೆ, ಸದರಿ ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ಠಾಣಾಧಿಕಾರಿಗಳ, ಇತರೆ ಅಧಿಕಾರಿ/ಸಿಬ್ಬಂದಿಗಳ ನಿಯೋಜನ ಮತ್ತು ಪೊಲೀಸ್ ಐಟಿ ತಂತ್ರಾಂಶ ಅಳವಡಿಕೆಯು ಪೂರ್ಣಗೊಂಡಿರುವುದಿಲ್ಲ. ಆದುದರಿಂದ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳನ್ನು ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ವರ್ಗಾವಣೆ ಪಡೆದುಕೊಳ್ಳಲು ಸಾಧ್ಯವಾಗಿರುವುದಿಲ್ಲ.
ಪ್ರಸ್ತುತ 33 ಡಿಸಿಆರ್‌ಇ ಪೊಲೀಸ್ ಠಾಣೆಗಳ ಪೈಕಿ ಅನುಬಂಧ-1 ರಲ್ಲಿ ನಮೂದಿಸಿರುವ 15 ಡಿಸಿಆರ್‌ಇ ಠಾಣೆಗಳಲ್ಲಿ ಮೂಲಭೂತ ಸಿದ್ಧತೆಗಳು ಪೂರ್ಣಗೊಂಡಿರುತ್ತದೆ. ಆದ್ದರಿಂದ ದಿನಾಂಕ:12.06.2025 ರಿಂದ ಅನ್ವಯವಾಗುವಂತೆ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಅಧಿಸೂಚಿತ ಕಾಯಿದೆಗಳಡಿ ದಾಖಲಾಗುವ ಪ್ರಕರಣಗಳನ್ನು ಡಿಸಿಆರ್‌ಇ ಪೊಲೀಸ್ ಠಾಣೆಗಳಿಗೆ ವರ್ಗಾಯಿಸಲು ಸೂಚಿಸಲಾಗಿದೆ.
ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಉಲ್ಲೇಖಿತ (1)ರ ಅಧಿಸೂಚನೆಯನ್ವಯ ದಾಖಲಾಗುವ ಪ್ರಕರಣಗಳಲ್ಲಿ ಈ ಕೆಳಕಂಡ ಪರಿಶೀಲನಾ ಪಟ್ಟಿಯಲ್ಲಿ ನಮೂದಿಸಿರುವ ಅಂಶಗಳನ್ನು ತನಿಖಾಧಿಕಾರಿಯವರು ಭರ್ತಿ ಮಾಡಿ ತಮ್ಮ ವರದಿಯೊಂದಿಗೆ ಸಂಬಂಧಪಟ್ಟ ಡಿಸಿಆರ್‌ಇ ಪೊಲೀಸ್ ಠಾಣೆಗೆ ಮುಂದಿನ ತನಿಖೆಗಾಗಿ ವರ್ಗಾಯಿಸತಕ್ಕದ್ದು ಮತ್ತು ಈ ಮಾಹಿತಿಯನ್ನು ತಮ್ಮ ಘಟಕಾಧಿಕಾರಿಯವರಿಗೆ ಸಮುಚಿತ ಮಾರ್ಗದಲ್ಲಿ ಸಲ್ಲಿಸತಕ್ಕದ್ದು.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…