ಪ್ರಜಾಪ್ರಭುತ್ವದ ಆಧಾರ ಸ್ತಂಭವೇ ಸಂವಿಧಾನ-ಪ್ರೊ.ಬಿ.ಎಸ್.ಬಿರಾದಾರ


ಬೀದರ.26.ಜನವರಿ.25:- ಭವ್ಯ ಭಾರತ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವೇ ಜೀವಾಳ ಹಾಗೂ ಆಧಾರ ಸ್ತಂಭವಾಗಿದೆ. ಹೀಗಾಗಿ ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಜಗತ್ತಿನಲ್ಲಿ ಸದೃಢವಾಗಿ ಆಡಳಿತ ನಡೆಸುತ್ತಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರರವರು ಹೇಳಿದರು.


ಅವರು ಇಂದು ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 76ನೆಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತಾನಾಡುತ್ತಾ ಸರ್ವರೂ ಸಂವಿಧಾನದ ಆಶಯಗಳನ್ನು ಗೌರವಿಸಬೇಕಾದ ಅಗತ್ಯವಿದೆ. ಯುವಕರು ತಮ್ಮ ಹಕ್ಕುಗಳೊಂದಿಗೆ ತಮ್ಮ ಕರ್ತವ್ಯವನ್ನೂ ಸಹ ಮರೆಯಬಾರದು.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಭವಿಷ್ಯ ನಿರ್ಮಿಸಿಕೊಳ್ಳಬೇಕೆಂದರು. ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿಶ್ವವಿದ್ಯಾಲಯದಲ್ಲಿಯೂ ಸಹ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ತಮ್ಮ ಹಕ್ಕುಗಳಂತೆ ಕರ್ತವ್ಯಗಳನ್ನೂ ಸಹ ಪಾಲಿಸಬೇಕಾಗಿದೆ ಎಂದರು.


ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಆಡಳಿತ ಸುರೇಖಾ ಕೆ.ಎ.ಎಸ್. ಅವರು ಮಾತನಾಡಿ, ಸದೃಢ ಭಾರತದ ನಿರ್ಮಾಣದಲ್ಲಿ ದೇಶದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಿ ಆದರ್ಶ ಭಾರತವನ್ನು ನಿರ್ಮಿಸೋಣವೆಂದರು.


ಇದೇ ಸಂದರ್ಭದಲ್ಲಿ 76ನೆಯ ಗಣರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ಬೀದರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ, ಆಶುಭಾಷಣ, ರಸಪ್ರಶ್ನೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ಹಾಗೂ ಪ್ರಶಸ್ತಿಪತ್ರಗಳನ್ನು ವಿತರಿಸಿದರು.


ಈ ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ನಾಗಭೂಷಣ ಕಮಠಾಣೆ, ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಪರಮೇಶ್ವರ ನಾಯ್ಕ.ಟಿ, ಬೀದರ ವಿಶ್ವವಿದ್ಯಾಲಯದ ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ವಿ.ಗಬಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಾ.ಶಾಂತಕುಮಾರ ಚಿದ್ರಿಯವರು ವಚನಗಾಯನ ಮಾಡಿದರು. ಡಾ.ಶ್ರೀಕೃಷ್ಣ ಚಕ್ರವರ್ತಿಯವರು ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು, ಡಾ.ಮುಸ್ತಾಕೀಮ್‍ರವರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಡಾ.ಅಂಬರೀಶ ವೀರನಾಯಕರವರು ವಂದಿಸಿದರು, ಡಾ.ರಾಮಚಂದ್ರ ಗಣಾಪೂರರವರು ಕಾರ್ಯಕ್ರಮವನ್ನು ನಿರೂಪಿಸಿದರು

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

6 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

6 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

6 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

6 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

6 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

7 hours ago