ಪ್ರತಿಯೊಂದು ಶಾಲೆಯಲ್ಲಿ ಮಕ್ಕಳ  ಸಹಾಯವಾಣಿ ಸಂಖ್ಯೆ ಅಂಟಿಸಬೇಕು-ಶಶಿಧರ ಕೋಸಂಬೆ.!

ಬೀದರ.18.ಫೆಬ್ರುವರಿ.25:-ಜಿಲ್ಲೆಯಲ್ಲಿ 1 ಲಕ್ಷ ವಿದ್ಯಾರ್ಥಿಗಳ ಆಧಾರ ವಿವರವನ್ನು ಸಾಪ್ಟವೇರನಲ್ಲಿ ದಾಖಲಿಸದೇ ಇರುವುದಕ್ಕೆ ಮಕ್ಕಳಿಗೆ ದೊರೆಯಬೇಕಾದ ವಿದ್ಯಾರ್ಥಿ ವೇತನ ವಿಳಂಭವಾಗುತ್ತಿದೆ, ಸಿಆರ್‌ಪಿ, ಬಿಆರ್‌ಪಿ ಹಾಗೂ ಬಿಇಓ ಗಳು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ತಿಳಿಸಿದರು.


ಅವರು ಜಿಲ್ಲಾ ಪಂಚಾಯತದಲ್ಲಿoದು ಉಚಿತ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಸಮರ್ಪಕ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಂವಾದ ಹಾಗೂ ಪುನಶ್ವೇತನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಒಟ್ಟು 3.33 ಲಕ್ಷ ವಿದ್ಯಾರ್ಥಿಗಳು ಇದ್ದು, ಎಲ್ಲ ಮಕ್ಕಳ ಡಾಟ್‌ಬೇಸ್ ವಿವರ ದಾಖಲಾಗಬೇಕಿದೆ.

ಸಾಕಷ್ಟು ಮಕ್ಕಳ ಶಿಕ್ಷಣಕ್ಕೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳಿಗೆ ತಲುಪದೇ ಇದ್ದರೆ ಯೋಜನೆಗಳು ಸಾಕಾರಗೊಳ್ಳದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಾರೆ.

ಈ ನಿಟ್ಟಿನಲ್ಲಿ ಅಧಿಕಾರಿಗಳು ನಿರ್ಲಕ್ಷ, ಬೇಜಬ್ದಾರಿ ತೋರದೇ ಕ್ರೀಯಾಶೀಲರಾಗಿ ಪ್ರಾಮಾಣಿಕವಾಗಿ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಸೇವೆ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಹ ಮುಖ್ಯವಾಹಿನಿಗೆ ತರಲು ಸಿಆರ್‌ಸಿ, ಬಿಆರ್‌ಸಿ ತೀವ್ರ ಪ್ರಯತ್ನ ಮಾಡಬೇಕಿದೆ.

ಪ್ರತಿಯೊಂದು ಶಾಲೆಯಲ್ಲಿ ಮಕ್ಕಳ ರಕ್ಷಣಾ ನೀತಿ 2016 ರನ್ವಯ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ ಅಂಟಿಸಬೇಕು. ದೂರು ಪೆಟ್ಟಿಗೆ, ಮಕ್ಕಳ ಸುರಕ್ಷತಾ ಸಮಿತಿ ರಚಿಸಬೇಕೆಂದು ಕೋಸಂಬೆ ತಿಳಿಸಿದರು. ಶಾಲೆಯಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕ ಹಾಗೂ ತಾತ್ಕಾಲಿಕ ಸಿಬ್ಬಂದಿಗಳ ಬದ್ಧತಾ ಪ್ರಮಾಣ ಪತ್ರ ಹಾಗೂ ಪೊಲೀಸ್ ವಿಚಾರಣೆ ಸಹ ಆಗಬೇಕೆಂದರು.


ಜಿಲ್ಲೆಯ ತೋರಣಾ ಹಾಗೂ ವಡಗಾಂವನಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ತೀವ್ರ ಖಂಡನೀಯ ಹಾಗೂ ವಿಷಾದಕರ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ರಕ್ಷಣೆಗೆ ಸಜ್ಜಾಗಿ ಶಿಕ್ಷಕ ವೃತ್ತಿಗೆ ಗೌರವ ಹೆಚ್ಚಿಸಬೇಕಾದ ಅನಿವಾರ್ಯತೆ ಇದೆಯೆಂದು ಕೋಸಂಬೆ ಹೇಳಿದರು.


ಹುಮನಾಬಾದನಲ್ಲಿ ಮೂರು ಹಾಗೂ ಬೀದರ ತಾಲ್ಲೂಕಿನಲ್ಲಿ ಒಂದು ಒಟ್ಟು ನಾಲ್ಕು ವಿದ್ಯಾರ್ಥಿಗಳು ಅಕಾಲಿಕ ಮರಣ ಹೊಂದಿದ್ದು, ಅವರ ಕುಟುಂಬಕ್ಕೆ ಶಿಕ್ಷಣ ಇಲಾಖೆಯಿಂದ ದೊರೆಯಬೇಕಾದ ಒಂದು ಲಕ್ಷ ರೂ. ಧನ ಸಹಾಯವನ್ನು ಶೀಘ್ರವೇ ತಲುಪಿಸಬೇಕೆಂದು ಸಹ ಕೋಸಂಬೆ ತಿಳಿಸಿದರು.


ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಅವರು ಮಾತನಾಡಿ, ಶಿಕ್ಷಣ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿಷ್ಠೆ ಮಾಡದೇ ಇರುವುದು ತೀರ ಖಂಡನೀಯ ಹಾಗೂ ವಿಷಾದನೀಯ ಎಂದರು. ಸಭೆಗೆ ಸಂಪೂರ್ಣ ಮಾಹಿತಿಯನ್ನು ತರದೇ ನಿಷ್ಕಾಳಜಿ, ನಿರಾಸಕ್ತಿ ವಹಿಸಕೂಡದು, ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು. ಮಕ್ಕಳ ದೌರ್ಜನ್ಯ ಹಕ್ಕುಗಳ ಶೋಷಣೆ ಬಗ್ಗೆ ಶಿಕ್ಷಕರು ಸದಾ ಜಾಗೃತರಾಗಿ ಶಿಕ್ಷಕ ವೃತ್ತಿಯ ಗೌರವ ಹೆಚ್ಚಿಸಬೇಕೆಂದು ತಿಳಿಸಿದರು.


ಬಡವರ, ದೀನದಲಿತರ, ರೈತ, ಕೂಲಿಕಾರ್ಮಿಕರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿದಲ್ಲಿ ಅವರ ಜೀವನ ಸಫಲವಾಗುತ್ತದೆ. ಶಿಕ್ಷಣ ಅಧಿಕಾರಿಗಳಿಗೆ ಕಾಲಕಾಲಕ್ಕೆ ತರಬೇತಿಯ ಅಗತ್ಯ ಕಾಣುತ್ತಿದೆಯೆಂದು ತಿಳಿಸಿದರು.
ತಾವು ಜಿಲ್ಲೆಯ ವಿವಿಧ ಶಾಲೆಗಳಿಗೆ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಕೆಲ ಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಶೌಚಾಲಯದ ಕೊರತೆ ಹಾಗೂ ಆಹಾರ ಧಾನ್ಯಗಳಲ್ಲಿ ಹುಳು ಕಂಡುಬAದಿವೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ವಹಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದರು.


ಡಿಡಿಪಿಐ ಸಲೀಂ ಪಾಶಾ ಮಾತನಾಡಿ, ಜಿಲ್ಲೆಯಾದ್ಯಂತ ಬಾಕಿ ಉಳಿದಿರುವ ವಿದ್ಯಾರ್ಥಿಗಳಳ ಆಧಾರ ವಿವರ ದಾಖಲೀಕರಣ ಕಾರ್ಯ ಶೀಘ್ರವೇ ಪೂರ್ಣಗೊಳಿಸಲಾಗುವುದೆಂದರು. ಲಭ್ಯವಿರುವ ನಾಲ್ಕು ಕಿಟ್‌ಗಳನ್ನು ಔರಾದ್ ತಾಲ್ಲೂಕಿನಲ್ಲಿ ಉಪಯೋಗಿಸಿ ಮಕ್ಕಳ ಆಧಾರ ವಿವರ ನಮೋದನೆ ಪೂರ್ಣಗೊಳಿಸಲಾಗುವದೆಂದರು.


ವೇದಿಕೆಯಲ್ಲಿ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗುರುರಾಜ ಶೆಟ್ಟಿ ಸೇರಿದಮತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

2 hours ago

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

6 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

7 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

7 hours ago

ರಾಜ್ಯ ಶಿಕ್ಷಣ ನೀತಿ’ ಆಯೋಗ ಶಿಫಾರಸು : ಬೋರ್ಡ್ ಶಾಲೆಗಳಲ್ಲಿ `ಕನ್ನಡ ಬೋಧನೆ’ ಕಡ್ಡಾಯ

ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…

7 hours ago

ರಾಕಿ ಕಟ್ಟುವ ಸಹೋದರಿಯರಿಗೆ ಹೆಲ್ಮೇಟ ವಿತರಣೆ

ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…

9 hours ago