ಬೀದರ.11.ಜುಲೈ 26:-ಬೀದರ ಜಿಲ್ಲೆಯ 181 ಗ್ರಾಮ ಪಂಚಾಯತಿಗಳಲ್ಲಿ (ಔರಾದ (ಬಿ)-21, ಬಸವಕಲ್ಯಾಣ-30, ಭಾಲ್ಕಿ,-40, ಬೀದರ-32, ಹುಮನಾಬಾದ-19, ಹುಲಸೂರ-7, ಚಿಟಗುಪ್ಪಾ-14, ಕಮಲನಗರ-18) “ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರವನ್ನು ಎಲ್ಲಾ ಅರ್ಹ ಅರ್ಜಿದಾರರಿಗೆ ಕಾಲಮಿತಿಯೊಳಗೆ ವಿತರಿಸುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಹಾಯ ಮತ್ತು ಸೌಲಭ್ಯ ಕೌಂಟರಗಳನ್ನು ಪ್ರಾರಂಭಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ ತಿಳಿಸಿದ್ದಾರೆ.
ಮುಂದುವರೆದು ಇಲ್ಲಿಯವರೆಗೆ ಜಿಲ್ಲಾದ್ಯಂತ ವಿವಿಧ ಗ್ರಾಮ ಪಂಚಾಯತಿಗಳಲ್ಲಿ 201 ಅರ್ಜಿಗಳನ್ನು ಸ್ವೀಕೃತ ವಾಗಿರುತ್ತವೆ. ಈ ಸಹಾಯ ಮತ್ತು ಸೌಲಭ್ಯ ಕೌಂಟರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳು ನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಹಾಯ ಮತ್ತು ಸೌಲಭ್ಯ ಕೌಂಟರಗಳ ಕಾರ್ಯನಿರ್ವಹಣೆಯ ಒಟ್ಟಾರೆ ಉಸ್ತುವಾರಿ ಮಾಡುತ್ತಿದ್ದಾರೆ. ಸಾರ್ವಜನಿಕರು *ಶಾಶ್ವತ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ* ಪಡೆಯಲು ಗ್ರಾಮ ಪಂಚಾಯತಿಗಳಲ್ಲಿ ತೆರಯಲಾದ ಸಹಾಯ ಮತ್ತು ಸೌಲಭ್ಯ ಕೌಂಟರಗಳ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯ ಮತ್ತು ಸೌಲಭ್ಯ ಕೌಂಟರಗಳ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಪ್ರತಿ ಗ್ರಾಮ ಪಂಚಾಯತ್‌ಯಲ್ಲಿ ಸಹಾಯ ಸೌಲಭ್ಯಕ್ಕೆ ಅರ್ಜಿ ಆಹ್ವಾನ.?