ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ.

ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ

ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರ ವಿವಿಧ SSLC.PUC ಹಾಗೂ ವಿವಿಧ ಪದವಿಗಳು ಹಾಗೂ ಅನೇಕ ಪ್ರಕಾರದ್ ತಬೇತಿಗಳಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಈ ಕೋರ್ಸ್‍ಗಳಿಗೆ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ compartmental/ carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ರಾಜ್ಯ/ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ/ ಯುಜಿಸಿ ಯಿಂದ ಪಡೆದ ಡೀಮ್ಡ್ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ (ಅಟೋನಮಸ್) ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ

ಅರ್ಹರಿರುವುದಿಲ್ಲ. ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸತಕ್ಕದ್ದು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು (native district ) ನಲ್ಲಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಆನ್‍ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಎಸ್‍ಎಸ್‍ಎಲ್‍ಸಿ- ಅಭ್ಯರ್ಥಿಯ ಫೋಟೊ. ಎಸ್ಸೆಸ್ಸೆಲ್ಸಿ ಅಂಕ ಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್.

ದ್ವಿತೀಯ ಪಿ.ಯು.ಸಿ

ಅಭ್ಯರ್ಥಿಯ ಪೋಟೋ, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್, ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್.

ಅಭ್ಯರ್ಥಿಯ ಫೋಟೋ, ಎಲ್ಲಾ ಸೆಮ್‍ಗಳ ಅಂಕಪಟ್ಟ, ಎಸ್ಸೆಸ್ಸೆಲ್ಸಿ ಅಂಕಪಟ್ಟ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಸಲ್ಲಿಸಬೇಕು.

ವಿದ್ಯಾರ್ಥಿಗಳು http://www.sw.kar.nic.inನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್ ಫ್ರೀ ದೂರವಾಣಿ ಸಂಖ್ಯೆ 080-22634300, 080-22353757 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

2 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

3 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

3 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

9 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

9 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

10 hours ago