09/06/2025 11:49 PM

Translate Language

Home » ಲೈವ್ ನ್ಯೂಸ್ » ಪ್ರಥಮ ಬಿವಿಎ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಪ್ರಥಮ ಬಿವಿಎ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.28.ಏಪ್ರಿಲ್.25:- ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ.) ತರಗತಿಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.


ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ  htts://uucms.karnataka.gov.in.                   https://www.cavamysore.karnataka.gov.in.     ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ 0821-2438931ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!