ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಾಗಿ  ಫಲಾನುಭವಿಗಳ ಆಯ್ಕೆ ಸಂಬಂಧ ಆಗಸ್ಟ್ 20ರಂದು ಸಭೆ

ರಾಯಚೂರು.18.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ ಜಾರಿಯಲ್ಲಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎ.ಹೆಚ್.ಪಿಆರ್ಡಿ 2,419 ಮನೆಗಳಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ ಪಂಗಡ ವರ್ಗದ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಲುವಾಗಿ ಆಗಸ್ಟ್ 20ರ ಬೆಳಿಗ್ಗೆ 11.30ಕ್ಕೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ
ಪಂಗಡಗಳ ಅಭಿವೃದ್ಧಿ ಪರ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿ ಯಶಸ್ವಿಗೊಳಿಸಿಬೇಕೆಂದು ಕೋರಲಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪಘಟಕ ಎ.ಹೆಚ್.ಪಿ ರಡಿ ಒಟ್ಟು 2,419 ಮನೆಗಳ ನಿರ್ಮಾಣ ಜಾರಿಯಲ್ಲಿ ಇರುತ್ತದೆ. ಇದರಲ್ಲಿ ನಗರದ ಬಡ ವಸತಿ ರಹಿತರಿಗೆ ಸೌಲಭ್ಯ ಕಲ್ಪಿಸುವ ಅತಿ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಪ.ಜಾತಿ ವರ್ಗದವರಿಗೆ 951 ಹಾಗೂ ಪ.ಪಂಗಡ ವರ್ಗದವರಿಗೆ 1,053 ಮನೆಗಳು ಒಟ್ಟು 2,400 ಗುರಿ ನಿಗದಿಯಾಗಿದೆ. ಆದರೆ ಈ ವರ್ಗದಿಂದ ಇದುವರೆಗೂ ನೀರಿಕ್ಷತ ಮಟ್ಟದಲ್ಲಿ ಅರ್ಜಿಗಳು ಬಂದಿರುವುದಿಲ್ಲ.

ಈ ಇಂತಹ ಮಹತ್ವಪೂರ್ಣ ಯೋಜನೆಯಡಿ ಬಡ ವಸತಿ ರಹಿತ ಪ.ಜಾತಿ ಪ.ಪಂಗಡದ ವರ್ಗದವರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಅಗತ್ಯವಾಗಿದೆ. ಈ ವರ್ಗದವರಿಂದ ಅರ್ಜಿ ಪಡೆದು ಯೋಜನೆ ಯಶಸ್ವಿಗೊಳಿಸುವುದು ಅಗತ್ಯವಾಗಿದ್ದು, ಈ ಕುರಿತು ಚರ್ಚಿಸಲು ಪಾಲಿಕೆಯ ಆಯಕ್ತರ ಅಧ್ಯಕ್ಷತೆಯಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.

ಈ ಸಭೆಗೆ ನಗರದ ಪರಿಶಿಷ್ಟ
ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಪರ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಾಗುವಂತೆ ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ…

6 hours ago

ರಿಲಾಯನ್ಸ್‌ ಫೌಂಡೇಶನ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ರಿಲಾಯನ್ಸ್‌ ಫೌಂಡೇಶನ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 2025-26 ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನವು  ರ ಶೈಕ್ಷಣಿಕ ವರ್ಷಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ,…

7 hours ago

30,000 ಹುದ್ದೆಗಳು, ಪುನರ್‌ರಚನೆಗೆ ಮುಂದಾದ ಪ್ರಸಾರ ಭಾರತಿ!

ಮುಂಬೈ.22.ಆಗಸ್ಟ್.25:-  ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊವನ್ನು ನಿರ್ವಹಿಸುವ ಪ್ರಸಾರಕಕ್ಕೆ 45,791 ಅನುಮೋದಿತ ಸಿಬ್ಬಂದಿ ಬಲ ಇದೆ. ಭಾರತಿಯು ದೀರ್ಘಕಾಲದ…

9 hours ago

FREE KAS.IAS ತರಬೇತಿಗೆ ಅರ್ಜಿ ಆಹ್ವಾನ.!

ಬೆಂಗಳೂರು.22.ಆಗಸ್ಟ್.25:- ಪ್ರಸಕ್ತ 2025-26 ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ UPSC ಯುಪಿಎಸ್‍ಸಿ/ KPSC ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು…

9 hours ago

ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ.!

ದಕ್ಷಿಣ ಕನ್ನಡ.22.ಆಗಸ್ಟ್ .25:- ಉಜಿರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ  ಪಟ್ಟಣವಾಗಿದೆ.  ಮಹಿಳೆಯರಿಂದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ…

10 hours ago

ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿಗೆಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಕೆಳಕಂಡ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ…

16 hours ago