ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಸದುಪಯೋಗ ಪಡೆಯಲು ಮನವಿ

ಬೀದರ.07.ಆಗಸ್ಟ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿದೆ.

ಈ ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬಹುದಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತಿ/ನಗರ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ತೊಗರಿ (ಮಳೆಯಾಶ್ರಿತ(ಮ.ಆ)) ಹಾಗೂ ಸೋಯಾಅವರೆ (ಮ.ಆ) ಬೆಳೆಗಳು ಮತ್ತು ಇತರೆ ಬೆಳೆಗಳಾದ ಹೆಸರು (ಮ.ಆ), ಸೂರ್ಯಕಾಂತಿ (ಮ.ಆ), ಉದ್ದು (ಮ.ಆ), ಮುಸುಕಿನ ಜೋಳ (ಮ.ಆ), ಶೇಂಗಾ (ಮ.ಆ), ಜೋಳ (ಮ.ಆ), ಎಳ್ಳು (ಮ.ಆ), ಸಜ್ಜೆ (ಮ.ಆ), ಸೋಯಾಅವರೆ (ನೀರಾವರಿ(ನೀ)), ಭತ್ತ (ನೀ & ಮ.ಆ), ಹತ್ತಿ (ಮ.ಆ) ಬೆಳೆಗಳನ್ನು ವಿವಿಧ ತಾಲ್ಲೂಕಿಗೆ ನಿಗದಿಪಡಿಸಿ, ಹೋಬಳಿ ಮಟ್ಟಕ್ಕೆ ಅನುಷ್ಠಾನಗೊಳಿಸಲು “ಯೂನಿವರ್ಸಲ್ ಸೋಂಪೊ ಜನರಲ್ ಇನ್‌ಶ್ಯೂರೆನ್ಸ್ ಕಂಪನಿ ಲಿಮಿಟೆಡ್” ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ.

ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ರೈತರು ಪಾಲ್ಗೊಳ್ಳಲು

ಕೊನೆಯ ದಿನಾಂಕ: 31-08-2025 ಆಗಿರುತ್ತದೆ.

ಬೆಳೆ ಸಾಲ ಪಡೆಯುವ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೊಡಿಸಿದ ಬ್ಯಾಂಕ್ ಖಾತೆ ವಿವರ ಮತ್ತು ಆಧಾರ ಕಾರ್ಡ್ನ ಪ್ರತಿಯನ್ನು ಸಂಬoಧಿಸಿದ ಬ್ಯಾಂಕ ಗಳಿಗೆ ಒದಗಿಸಿ ನೋಂದಣಿ ಮಾಡಿಸಬಹುದು. ರೈತರು ನೋಂದಣಿಗಾಗಿ ಕಡ್ಡಾಯವಾಗಿ ಹೊಂದಿರಬೇಕು.

ಹೆಚ್ಚಿನ ವಿವರಗಳಿಗೆ ಸ್ಥಳೀಯ ಗ್ರಾಮೀಣ/ಸಹಕಾರಿ/ಬ್ಯಾಂಕುಗಳನ್ನು ಅಥವಾ ಸಂಬoಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಂಬoಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

3 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

3 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

3 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

3 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

3 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

3 hours ago