ಬೀದರ | ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಸದುಪಯೋಗ ಪಡೆಯಲು ಮನವಿ

ಬೀದರ.13.ಜೂನ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿದೆ. ಈ ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬಹುದಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬಹುದಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕ: 31-07-2025 ಹಾಗೂ ಸೂರ್ಯಕಾಂತಿ (ಮ.ಆ) ಬೆಳೆಗೆ ದಿನಾಂಕ: 16-08-2025 ಆಗಿರುತ್ತದೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತಿ/ನಗರ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ತೊಗರಿ (ಮಳೆಯಾಶ್ರಿತ(ಮ.ಆ)) ಹಾಗೂ ಸೋಯಾಅವರೆ (ಮ.ಆ) ಬೆಳೆಗಳು ಮತ್ತು ಇತರೆ ಬೆಳೆಗಳಾದ ಹೆಸರು (ಮ.ಆ), ಸೂರ್ಯಕಾಂತಿ (ಮ.ಆ), ಉದ್ದು (ಮ.ಆ), ಮುಸುಕಿನ ಜೋಳ (ಮ.ಆ), ಶೇಂಗಾ (ಮ.ಆ), ಜೋಳ (ಮ.ಆ), ಎಳ್ಳು (ಮ.ಆ), ಸಜ್ಜೆ (ಮ.ಆ), ಸೋಯಾಅವರೆ (ನೀರಾವರಿ(ನೀ)), ಭತ್ತ (ನೀ & ಮ.ಆ), ಹತ್ತಿ (ಮ.ಆ) ಬೆಳೆಗಳನ್ನು ವಿವಿಧ ತಾಲ್ಲೂಕಿಗೆ ನಿಗದಿಪಡಿಸಿ, ಹೋಬಳಿ ಮಟ್ಟಕ್ಕೆ ಅನುಷ್ಠಾನಗೊಳಿಸಲು “ಯೂನಿವರ್ಸಲ್ ಸೋಂಪೊ ಜನರಲ್ ಇನ್‌ಶ್ಯೂರೆನ್ಸ್ ಕಂಪನಿ ಲಿಮಿಟೆಡ್” ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ.

ಬೆಳೆಸಾಲ ಪಡೆದ ರೈತರಿಗಾಗಿ ಆಪ್ಟಿಂಗ-ಔಟ ಮತ್ತು ಆಪ್ಟಿಂಗ-ಇನ್ ಎಂಬ ಅವಕಾಶವನ್ನು ರೈತರಿಗೆ ನೀಡಲಾಗಿದೆ. ಇದರಲ್ಲಿ ಬೆಳೆಸಾಲ ಪಡೆದ ರೈತರು ಬೆಳೆವಿಮೆ ಮಾಡಿಸುವುದು ಕಡ್ಡಾಯವಾಗಿರುವುದಿಲ್ಲ.

ಬೆಳೆವಿಮೆ ಮಾಡಲು ಇಚ್ಛಿಸದ ಸಾಲ ಪಡೆದಂತಹ ರೈತರು ಬೆಳೆವಿಮೆ ಮಾಡಿಸಲು ನಿಗಧಿಪಡಿಸಿರುವ ಅಂತಿಮ ದಿನಾಂಕಕ್ಕಿoತ 7 ದಿನದ ಮುಂಚಿತವಾಗಿ ಸಂಬAಧಪಟ್ಟ ಬ್ಯಾಂಕಿಗೆ ಆಪ್ಟಿಂಗ-ಔಟ ಎಂಬ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಸದರಿ ಅರ್ಜಿ ನೀಡಿದ ರೈತರನ್ನು ವಿಮೆ ಯೋಜನೆಯಿಂದ ಬ್ಯಾಂಕ್‌ನವರು ಹೊರಗಿಡಬೇಕಾಗುತ್ತದೆ. ಸಾಲ ಪಡೆದಿರುವ ರೈತರ ಪೈಕಿ ಆಪ್ಟಿಂಗ-ಔಟ ನಮೂನೆ ನೀಡದ ಉಳಿದ ಎಲ್ಲಾ ರೈತರನ್ನು ವಿಮಾ ಯೋಜನೆಯಡಿ ತರುವುದು ಕಡ್ಡಾಯವಾಗಿರುತ್ತದೆ.

ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೊಡಿಸಿದ ಬ್ಯಾಂಕ್ ಖಾತೆ ವಿವರ ಮತ್ತು ಆಧಾರ ಕಾರ್ಡ್ನ ಪ್ರತಿಯನ್ನು ಸಂಬAಧಿಸಿದ ಬ್ಯಾಂಕ ಅಥವಾ ಸಿ.ಎಸ್.ಸಿ ಕೇಂದ್ರಗಳಿಗೆ ಒದಗಿಸಿ ನೋಂದಣಿ ಮಾಡಿಸಬಹುದು. ರೈತರು ನೋಂದಣಿಗಾಗಿ ಕಡ್ಡಾಯವಾಗಿ ಈಖUIಖಿS Iಆ (ಈIಆ) ಹೊಂದಿರಬೇಕು.

ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ/ ಗ್ರಾಮೀಣ/ ಸಹಕಾರಿ/ ಬ್ಯಾಂಕುಗಳನ್ನು/s ಸಾರ್ವಜನಿಕ ಸೇವಾ ಕೇಂದ್ರ ಅಥವಾ ಸಂಬoಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಂಬAಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

2 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

2 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

3 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

3 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

3 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

3 hours ago