ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಅಂಬೇಡ್ಕರ್ ಜಯಂತಿಯಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ ಹಿಸಾರ್‌ಗೆ ಪ್ರಯಾಣಿಸಿ ಹಿಸಾರ್‌ನಿಂದ ಅಯೋಧ್ಯೆಗೆ ವಾಣಿಜ್ಯ ವಿಮಾನ ಹಾರಾಟಕ್ಕೆ ಚಾಲನೆ ನೀಡಲಿದ್ದಾರೆ ಮತ್ತು ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಶ್ರೀ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಪ್ರಧಾನಿ ಯಮುನಾನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕೊನೆಯ ಮೈಲಿಗೆ ವಿದ್ಯುತ್ ತಲುಪುವ ದೃಷ್ಟಿಕೋನದ ಜೊತೆಗೆ ಈ ಪ್ರದೇಶದಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಶ್ರೀ ಮೋದಿ ಅವರು ಯಮುನಾನಗರದಲ್ಲಿ ದೀನಬಂಧು ಛೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ಆಧುನಿಕ ಉಷ್ಣ ವಿದ್ಯುತ್ ಘಟಕದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಗೋಬರ್ಧನ್ ಯೋಜನೆಯ ದೃಷ್ಟಿಕೋನವನ್ನು ಮುಂದಕ್ಕೆ ತೆಗೆದುಕೊಂಡು, ಪ್ರಧಾನಿ ಯಮುನಾನಗರದ ಮುಕರಬ್‌ಪುರದಲ್ಲಿ ಸಂಕುಚಿತ ಜೈವಿಕ ಅನಿಲ ಸ್ಥಾವರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶ್ರೀ ಮೋದಿ ಅವರು ಭಾರತ್‌ಮಾಲಾ ಪರಿಯೋಜನಾ ಅಡಿಯಲ್ಲಿ ಸುಮಾರು 1,070 ಕೋಟಿ ರೂಪಾಯಿ ಮೌಲ್ಯದ 14.4 ಕಿ.ಮೀ. ರೇವಾರಿ ಬೈಪಾಸ್ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…