09/06/2025 4:28 PM

Translate Language

Home » ಲೈವ್ ನ್ಯೂಸ್ » ಪ್ರಧಾನಿ ಮೋದಿ ವಿಮಾನದ ಮೇಲೆ ಉಗ್ರ ದಾಳಿ ಬೆದರಿಕೆ.!

ಪ್ರಧಾನಿ ಮೋದಿ ವಿಮಾನದ ಮೇಲೆ ಉಗ್ರ ದಾಳಿ ಬೆದರಿಕೆ.!

Facebook
X
WhatsApp
Telegram

ಮುಂಬೈ.13.ಫೆ.25:-ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ಯಾರಿಸ್‌ಗೆ ಹೋಗುವ ಮಾರ್ಗಮಧ್ಯೆ ಅವರ ವಿಮಾನದ ಮೇಲೆ ಉಗ್ರ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬೆದರಿಕೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ.

ಈ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು, ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಫ್ರಾನ್ಸ್ ನ ಬಂದರು ನಗರಿ ಮಾರ್ಸಿಲ್ಲೆಗೆ ಪ್ರಧಾನಿ ಮೋದಿ ಆಗಮನ, ವಿ.ಡಿ ಸಾವರ್ಕರ್ ಬಣ್ಣನೆ

ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಇಂದು ದಕ್ಷಿಣ ಫ್ರಾನ್ಸ್‌ನ ಮಾರ್ಸಿಲ್ಲೆಗೆ ಆಗಮಿಸಿ, ಬಂದರು ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿ ಡಿ ಸಾವರ್ಕರ್ ಅವರ ಸ್ಮರಣಾರ್ಥ ಗೌರವ ಸಲ್ಲಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!