ಕೂಪ್ಪಳ.23.ಜುಲೈ.25:- ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನುಷ್ಠಾನ ಸಮಿತಿ ಸದಸ್ಯರು ‘ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಭಾವಚಿತ್ರದ ಜತೆ ನಮ್ಮ ಭಾವಚಿತ್ರವನ್ನೂ ಹಾಕಬೇಕು’ ಎಂದು ಆಗ್ರಹಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನುಷ್ಠಾನ ಸಮಿತಿ ಸದಸ್ಯರು ‘ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಭಾವಚಿತ್ರದ ಜತೆ ನಮ್ಮ ಭಾವಚಿತ್ರವನ್ನೂ ಹಾಕಬೇಕು’ ಎಂದು ಆಗ್ರಹಿಸಿದ್ದಾರೆ.
‘ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿಯ ಭಾವಚಿತ್ರ ಅಳವಡಿಸುವದರ ಜತೆ ಗ್ಯಾರಂಟಿ ಸಮಿತಿ ಸದಸ್ಯರ ಬ್ಯಾನರ್ ಕೂಡ ಅಳವಡಿಸಬೇಕು’ ಎಂದು ಸದಸ್ಯರಾದ ದೇವರಾಜ ನಡುವಿನಮನಿ, ಜ್ಯೋತಿ ಗೊಂಡಬಾಳ ಒತ್ತಾಯಿಸಿದರು. ಆಹಾರ ನಿರೀಕ್ಷಕರು ಪಡಿತರ ಹಂಚುವಾಗ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಹಾರ ಧಾನ್ಯ ಪರಿವೀಕ್ಷಿಸಿ ಜಿಪಿಎಸ್ ಫೋಟೊ ವ್ಯಾಟ್ಸ್ ಆಯಪ್ ಗ್ರೂಪ್‌ಗೆ ಹಾಕಬೇಕು.
ಆಹಾರ ಧಾನ್ಯ ನೀಡುವಾಗ ಸ್ಥಳೀಯರಿಗೆ ಆದ್ಯತೆ ಕೊಡಬೇಕು ಎನ್ನುವುದನ್ನು ಪಾಲಿಸಲು ಸೂಚಿಸಬೇಕು ಎಂದರು.
ಸದಸ್ಯ ಮಾನ್ವಿ ಪಾಷಾ ‘ಫೆಬ್ರುವರಿ ಹಾಗೂ ಮಾರ್ಚ್‌ನಲ್ಲಿ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ’ ಎಂದರು. ಆಗ ಅಧಿಕಾರಿಗಳು ಮೇ ತಿಂಗಳ ಹಣ ಜಮೆಯಾಗಿದೆ ಎಂದು ಹೇಳಿದಾಗ, ಇದರ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು ಎಂದು ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಬಾಲಚಂದ್ರನ್ ಎಸ್. ಸೂಚಿಸಿದರು.
ಕುಷ್ಟಗಿ-ಕೊಪ್ಪಳ ತಡೆ ರಹಿತ ಬಸ್ ವಾಹನಗಳಿದ್ದು ಇರಕಲ್ಲಗಡ ಗ್ರಾಮದಲ್ಲಿ ನಿಲುಗಡೆ ಮಾಡಲು ಕ್ರಮ ವಹಿಸಬೇಕು ಎನ್ನುವ ಬೇಡಿಕೆ ಬಗ್ಗೆ ಹಿಂದಿನ ಸಭೆಯಲ್ಲಿ ಚರ್ಚೆಯಾಗಿತ್ತು. ಈ ಕುರಿತು ಮನವಿ ಸಲ್ಲಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಹೇಳಿದರು.
ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ತಹಶೀಲ್ದಾರ್ ವಿಠ್ಠಲ್ ಚೌಗುಲಾ, ಸಮಿತಿ ಸದಸ್ಯರಾದ ರಾಮಣ್ಣ ಚೌಡ್ಕಿ, ಸವಿತಾ ಗೊರಂಟ್ಲಿ, ಅನ್ನದಾನಯ್ಯಸ್ವಾಮಿ, ಮೆಹಬೂಬಪಾಷಾ ಮಾನ್ವಿ, ಅನ್ವರ್ ಹುಸೇನ್ ಗಡಾದ, ಪರಶುರಾಮ ಕೊರವರ, ಆನಂದ ಕಿನ್ನಾಳ, ಲಕ್ಷ್ಮಣ ಡೊಳ್ಳಿನ ಪಾಲ್ಗೊಂಡಿದ್ದರು.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…