ಬೀದರ.24.ಏಪ್ರಿಲ್.25:- 2025-26ನೇ ಸಾಲಿಗೆ ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಯ (ಕನ್ನಡ ಮಾಧ್ಯಮ) ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್
ಮೂಲಕ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ವಿದ್ಯಾರ್ಥಿ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳೊಳಗಿರಬೇಕು. ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಅತಿ ಹಿಂದುಳಿದ ವರ್ಗದವರಿಗೆ ಈ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ. ಪೌರ ಕಾರ್ಮಿಕರ ಮಕ್ಕಳು. ಸಫಾಯಿ ಕರ್ಮಚಾರಿಗಳ ಮಕ್ಕಳು. ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು. ದೇವದಾಸಿ ರವರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರು. ಕೋವೀಡ್ ಮುಂತಾದ ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು. ಏಕ ಪೋಷಕ ಮಕ್ಕಳು. ಯೋಜನಾ ನಿರಾಶ್ರಿತರ ಮಕ್ಕಳು. ಕೊಳಗೇರಿಗಳಲ್ಲಿ ವಾಸಿಸುತ್ತಿರುವವರ ಮಕ್ಕಳು. ಸಾಲ ಬಾಧೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು. ದೌರ್ಜನ್ಯದಲ್ಲಿ ನೊಂದವರ ಮಕ್ಕಳು. ಮಾಜಿ ಸೈನಿಕರ ಮಕ್ಕಳು. ಕೃಷಿ ಕಾರ್ಮಿಕರ ಮಕ್ಕಳು. ಜೀತ ವಿಮುಕ್ತ ಮಕ್ಕಳು.
ಪ್ರಮುಖವಾಗಿ ಈ ಮೇಲಿನ ಹಿಂದುಳಿದ ವರ್ಗದವರಿಗೆ ಹಾಗೂ 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇಕಡಾ 60% ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮುಖ್ಯತೆ ನೀಡಲಾಗುವುದು.
ಸದರಿ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳ ಆಯ್ಕೆ ಕೋರಿ ಮಾದ್ಯಮಗಳನ್ನು ಕಡ್ಡಾಯವಾಗಿ ಸ್ಪಷ್ಟವಾಗಿ ಅರ್ಜಿಗಳಲ್ಲಿ ನಮೂದಿಸತಕ್ಕದ್ದು. ಒಂದು ಕುಟುಂಬದಲ್ಲಿ ಇಬ್ಬರಿಗೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೂ ಅಥವಾ ಬಾಲಕಿ ಇಲ್ಲದಿದ್ದಲ್ಲಿ ಇಬ್ಬರು ಬಾಲಕರಿಗೆ ಪ್ರವೇಶಾವಕಾಶ ಕಲ್ಪಿಸತಕ್ಕದ್ದು. ಪ್ರವೇಶ ಕೋರಿ ಬರುವ ಅರ್ಜಿಗಳಲ್ಲಿ ಶೇಕಡಾ 50% ರಷ್ಟು ಬಾಲಕರಿಗೆ ಮತ್ತು ಶೇಕಡಾ 50% ಬಾಲಕಿಯರಿಗೆ ಮೀಸಲಾತಿಯನ್ನು ಕಲ್ಪಿಸುವುದು.ಆಯ್ಕೆ ಮಾಡಲಾದ ವಿದ್ಯಾರ್ಥಿಗಳನ್ನು ಯಾವ ವಿದ್ಯಾ ಸಂಸ್ಥೆಗಳಲ್ಲಿ ದಾಖಲಾತಿ ಕೋರುತ್ತಾರೆ ಅದೇ ಶಾಲೆಯಲ್ಲಿ ಕಲ್ಪಿಸಲಾಗುವುದು. ಪರಿಶಿಷ್ಟ ಜಾತಿಯ 50 ವಿದ್ಯಾರ್ಥಿಗಳ ಗುರಿ ನಿಗದಿಪಡಿಸಲಾಗಿದೆ.
ಕಾರಣ 6ನೇ ತರಗತಿ ಪ್ರವೇಶಕ್ಕಾಗಿ ದಿನಾಂಕ: 19-04-2025 ರಿಂದ ದಿನಾಂಕ: 03-05-2025 ರ ಸಾಯಂಕಾಲ 5:00 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…