ಬೆಂಗಳೂರು.16.ಮೇ.25:- ದೇಶಾದ್ಯಂತ 2.5 ಲಕ್ಷ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ಅಜೀಂ ಪ್ರೇಮ್‌ಜಿ ಫೌಂಡೇಷನ್ ಘೋಷಿಸಿದೆ.
2025-26ನೇ ಶೈಕ್ಷಣಿಕ ಸಾಲಿನಲ್ಲಿ ಈ ಮಹತ್ವದ ಯೋಜನೆಯಡಿ ಕರ್ನಾಟಕ ಸೇರಿದಂತೆ 18 ರಾಜ್ಯಗಳ ವಿದ್ಯಾರ್ಥಿನಿಯರು ಪ್ರಯೋಜನ ಪಡೆಯಲಿದ್ದಾರೆ.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಫೌಂಡೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್, 2024-25ನೇ ಸಾಲಿನಲ್ಲಿ ಮಧ್ಯಪ್ರದೇಶ, ಉತ್ತರಪ್ರದೇಶ, ರಾಜಸ್ಥಾನ ಮತ್ತು ಜಾರ್ಖಂಡ್‌ನ 25 ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗಿತ್ತು ಎಂದು ಸ್ಮರಿಸಿದರು.
ಈ ಬಾರಿ ಯೋಜನೆಯನ್ನು ವಿಸ್ತರಿಸಲಾಗಿದ್ದು, 10 ಮತ್ತು 12ನೇ ತರಗತಿ ಉತ್ತೀರ್ಣರಾಗಿ ಮುಂದಿನ ಹಂತದ ಉನ್ನತ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿನಿಯರಿಗೆ ಆರ್ಥಿಕ ನೆರವು ಲಭ್ಯವಾಗಲಿದೆ ಎಂದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳು, ಕಾಲೇಜುಗಳು ಹಾಗೂ ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳು ನಡೆಸುವ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.
ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಡಿಪ್ಲೊಮಾ ಅಥವಾ ಪದವಿ ಕೋರ್ಸ್‌ಗಳನ್ನು ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ದೊರೆಯಲಿದೆ. ಉನ್ನತ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿರುವ ಕೆಲವು ಆಯ್ದ ಖಾಸಗಿ ಸಂಸ್ಥೆಗಳ ವಿದ್ಯಾರ್ಥಿನಿಯರನ್ನೂ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಈ ವಿದ್ಯಾರ್ಥಿವೇತನ ಯೋಜನೆಗಾಗಿ ಮೂರು ವರ್ಷಗಳ ಅವಧಿಗೆ ಒಟ್ಟು ₹2,250 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದು ವಾರ್ಷಿಕವಾಗಿ ಸುಮಾರು ₹750 ಕೋಟಿ ರೂಪಾಯಿಗಳಾಗುತ್ತದೆ. ಪ್ರತಿ ವಿದ್ಯಾರ್ಥಿನಿಗೂ ಅವರ ಕೋರ್ಸ್ ಪೂರ್ಣಗೊಳ್ಳುವವರೆಗೆ ಪ್ರತಿ ವರ್ಷ ₹30,000 ನೀಡಲಾಗುವುದು. ಈ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಷಕ್ಕೆ ಎರಡು ಬಾರಿ ನೇರವಾಗಿ ಜಮೆ ಮಾಡಲಾಗುವುದು ಎಂದು ಅವರು ವಿವರಿಸಿದರು.
“ಉತ್ತಮ ಶಾಲಾ ಶಿಕ್ಷಣವು ಜೀವನಕ್ಕೆ ಭದ್ರ ಬುನಾದಿಯಾಗಿದೆ, ಆದರೆ ಉನ್ನತ ಶಿಕ್ಷಣವು ಜೀವನದ ಸಾಮಾಜಿಕ ಮತ್ತು ಆರ್ಥಿಕ ನಿರೀಕ್ಷೆಗಳನ್ನು ಗಮನಾರ್ಹವಾಗಿ ಬದಲಾಯಿಸುವ ಸಾಮರ್ಥ್ಯ ಹೊಂದಿದೆ. ಭಾರತವು ಹಲವು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದ್ದರೂ, ಹುಡುಗಿಯರು ಶಿಕ್ಷಣದ ಪ್ರತಿ ಹಂತದಲ್ಲೂ ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದಾರೆ.
ಹುಡುಗಿಯರು ಉನ್ನತ ಶಿಕ್ಷಣವನ್ನು ಪಡೆಯಲು ಬೆಂಬಲ ನೀಡಲು ನಾವು ಗಣನೀಯ ಬದ್ಧತೆಯನ್ನು ಹೊಂದಿದ್ದೇವೆ. ಇದು ಅವರ ಜೀವನದ ಪಥದ ಮೇಲೆ ಹೆಚ್ಚಿನ ನಿಯಂತ್ರಣ ಸಾಧಿಸಲು ಸಹಾಯ ಮಾಡುತ್ತದೆ,” ಎಂದು ಅಜೀಂ ಪ್ರೇಮ್‌ಜಿ ಫೌಂಡೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್ ತಿಳಿಸಿದರು.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…