ಬೆಂಗಳೂರು.28.ಜೂನ್.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ online module ಸಿದ್ಧಪಡಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢಶಾಲಾ ಸಹಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ದಿನಾಂಕ : 25.04.2025 ರಂದು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ.
ಮೇಲ್ಕಂಡಂತೆ ಪ್ರಕಟಿಸಿದ್ದ ಪಟ್ಟಿಗೆ ಆಕ್ಷೇಪಣೆಗಳನ್ನು ವಿಭಾಗೀಯ ಕಛೇರಿಯ ಹಂತದಲ್ಲಿ ಸ್ವೀಕರಿಸಿ ತಿದ್ದುಪಡಿಗಳನ್ನು (inconsistence data ಒಳಗೊಂಡಂತೆ) ತಂತ್ರಾಂಶದಲ್ಲಿ ಅಳವಡಿಸಲು ಉಲ್ಲೇಖ (2) ರ ಸಭಾ ನಡಾವಳಿಯಲ್ಲಿ ಸೂಚಿಸಲಾಗಿರುತ್ತದೆ.
ಮೇಲ್ಕಂಡ ಅಂಶಗಳ ಹಿನ್ನಲೆಯಲ್ಲಿ ಈಗಾಗಲೇ ತಿದ್ದುಪಡಿಗಳನ್ನು ತಂತ್ರಾಂಶದಲ್ಲಿ ಇಂದೀಕರಿಸುವ ಕಾರ್ಯವು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ಜ್ಞಾಪನದೊಂದಿಗೆ ಲಗತ್ತಿಸಿರುವ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ಸಿದ್ಧಪಡಿಸಿ ದಿನಾಂಕ : 27.06.2025 ರೊಳಗೆ ಈ ಕಛೇರಿಗೆ ಸಲ್ಲಿಸಲು ತಿಳಿಸಿದೆ.
ದೃಢೀಕರಣ ಪತ್ರ
ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ ಶಿಕ್ಷಕರ ವಿವರಗಳನ್ನು ತಂತ್ರಾಂಶದಲ್ಲಿ ನಮೂದಿಸಿರುವ ಬಗ್ಗೆ ಸೂಚನೆ ನೀಡಲಾಗಿದೆ.
ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರ ರಾಜ್ಯ ಮಟ್ಟದ ಒಂದೇ ಜೇಷ್ಠತಾ ಪಟ್ಟಿ ಸಿದ್ಧಪಡಿಸುವ ಸಂಬಂಧ ಉಲ್ಲೇಖ(1) ಮತ್ತು ಉಲ್ಲೇಖ(2)ರಲ್ಲಿನ ಸೂಚನೆಗಳನ್ನಯ ವಿಭಾಗಕ್ಕೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ ಪಡೆದಿರುವ ಎಲ್ಲಾ ಶಿಕ್ಷಕರ ಸೇವಾ ವಿವರಗಳನ್ನು ಯಾವುದೇ ಲೋಪದೋಷವಿಲ್ಲದೇ ಮತ್ತು ಯಾವುದೇ ಶಿಕ್ಷಕರ ಹೆಸರನ್ನು ಕೈಬಿಡದೇ ತಂತ್ರಾಂಶದಲ್ಲಿ ಇಂದೀಕರಿಸಲಾಗಿದೆ ಎಂದು ಈ ಮೂಲಕ ದೃಢೀಕರಿಸಿದೆ.
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…
ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…