ಬೀದರ.13.ಮಾರ್ಚ.25:-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೀದರ ಅಧೀನದಲ್ಲಿ ಖಾಲಿ ಇರುವ ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಹುದ್ದೆಗಳು ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳಿಗೆ ಅತೀ ಅವಶ್ಯಕವಾಗಿರುವ ಸ್ಥಳಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಈ ಮೊದಲು ಅರ್ಜಿ ಆಹ್ವಾನಿಸಲಾಗಿತ್ತು.
ಕಾರಣಾಂತರಗಳಿoದ ಸದರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೇಯನ್ನು ರದ್ದುಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.