ಬೀದರ.06.ಫೆಬ್ರುವರಿ.25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕೃಷಿ ಇಲಾಖೆ ಬೀದರ ಸಹಯೋಗದಲ್ಲಿ ಫೆಬ್ರುವರಿ.9 ರಂದು ಬೆಳಿಗ್ಗೆ. 10 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣ ಬೀದರದಲ್ಲಿ ಜಿಲ್ಲಾ ಮಟ್ಟದ ಸಾವಯುವ ಮತ್ತು ಸಿರಿಧಾನ್ಯ ಮೇಳ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಬೀದರ ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷ ಸಿದ್ರಾಮಯ್ಯಾ ಸ್ವಾಮಿ, ಬೆಂಗಳೂರು ಕರ್ನಾಟಕ ಪ್ರದೇಶ ಕೃಷಿಕ ಸಮಾಜ ರಾಜ್ಯ ಪ್ರತಿನಿಧಿ ವಿಶ್ವನಾಥ ಪಾಟೀಲ ಮಾಡಗೊಳ, ಬೀದರ ಪಶುವೈದ್ಯಕೀಯ ಹಾಗೂ ಮೀನುಗಾರಿಕೆಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ಕೆ.ಸಿ.ವೀರಣ್ಣ, ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್, ಬೀದರ ಕೃಷಿ ಸಂಶೋಧನ ಕೇಂದ್ರ ಮುಖ್ಯಸ್ಥರಾದ ಡಾ.ಭವಾನಿ ಕೆ.
ಬೀದರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಸುನೀಲಕುಮಾರ ಎನ್.ಎಮ್. ಅವರುಗಳು ಭಾಗವಹಿಸಲಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…