ಇಂದು ರಾಜ್ಯಾದ್ಯಂತ ಬಂಜಾರಾ ಸಮಾಜ ಅರಿವಿನ ಬಂಜಾರ ಭಾಷೆಯ ಬಂಜಾರ ಭಾಷೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಪ್ರಧಾನಿಯವರಲ್ಲಿ ಕೋರಲಾಗಿದೆ ಎಂದು ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ.ಎ.ಆರ್ ಗೋವಿಂದಸ್ವಾಮಿ ಹೇಳಿದ್ದಾರೆ.
ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ವತಿಯಿಂದ ಕಳತಾವೂರ್ ಮಳಾವ್ – 03(ಸಜ್ಜನರ ಸಲ್ಲಾಪ -03) ಮೀನಾರೋ ಪಾಮಣೋ(ತಿಂಗಳ ಅತಿಥಿ) ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ ಹಾಗೂ ಬಂಜಾರ ಯುವಕ ಯುವತಿಯರಿಗೆ ಕಸೂತಿ.
ತರಬೇತಿ ಶಿಬಿರ ಯಶಸ್ವಿ ಆಯೋಜಿಸಲಾಗಿದೆ ಹಾಗೂ ವಿಜಯಪುರದಲ್ಲಿ ಹತ್ತು ದಿನಗಳ ಬಂಜಾರ ಆಭರಣ ತಯಾರಿಕೆ ಕಾರ್ಯಾಗಾರ ನಡೆಸಲಾಗಿದೆ ಬೆಂಗಳೂರು ನಗರದಲ್ಲಿ ಪ್ರತಿ ತಿಂಗಳು ನಾಡಿನ ಸಾಹಿತಿಗಳು ಚಿಂತಕರು ಪ್ರಗತಿಪರರು, ಸಮುದಾಯದ ಎಲೆಮರೆ ಕಾಯಿಗಳು ಮತ್ತು ಗಣ್ಯ ವ್ಯಕ್ತಿಗಳನ್ನು ಕರೆಸಿ ತಿಂಗಳ ಅತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇವುಗಳ ಜೊತೆಗೆ ಅಕಾಡೆಮಿಯು ಬಂಜಾರ ಸಮುದಾಯದ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡುವ, ಕೊಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದರು.
ಕಳೆದ ಆರು ತಿಂಗಳಿಂದ ಅಕಾಡೆಮಿಯು ನಿರಂತರ 28ಕ್ಕೂ ಹೆಚ್ಚಿನ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ನಡೆಸಿದ ಕಾರ್ಯ ಚಟುವಟಿಕೆ ವಿವರಿಸುತ್ತಾ ಪ್ರಸ್ತುತ ಬಂಜಾರ ವಿಶ್ವಕೋಶ (ಎನ್‍ಸೈಕ್ಲೋಪೀಡಿಯಾ) ರಚಿಸಲು ಅಕಾಡೆಮಿ ತೊಡಗಿದ್ದು ಪ್ರೊ. ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿರಚಿಸಲಾಗಿದೆ.
ಕಾರ್ಯದಲ್ಲಿ ಪ್ರಥಮ ಸಾಹಿತಿ ಹಾಗೂ ಕಲಾವಿದರ ಬಗ್ಗೆ ಸಾಕ್ಷ್ಯ ಚಿತ್ರ ನಿರ್ಮಾಣವಾಗುತ್ತಿವೆ ಎಂದು ತಿಳಿಸಿದರು.
Source: www.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…