ಬಡವರಿಗೆ ಅನುಕೂಲವಾಗಿದೆ ಗ್ಯಾರಂಟಿ ಯೋಜನೆಗಳು : 5 ಗ್ಯಾರಂಟಿಗಳನ್ನು ಶ್ಲಾಘಿಸಿದ ಗವರ್ನರ.!

ಬೆಂಗಳೂರು.03.ಮಾರ್ಚ.25:- ಬೆಂಗಳೂರಿನಲ್ಲಿ ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಇದೀಗ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೊಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು.

ಈ ವೇಳೆ ರಾಜ್ಯ ಸರ್ಕಾರ ಜಿಎಸ್‌ಟಿ ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನದ ಕುರಿತು ರಾಜ್ಯಪಾಲರು ಭಾಷಣ ಆರಂಭಿಸಿದರು.ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ.

ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ.

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು.

ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ.

ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ, 5 ಲಕ್ಷ ರೂಪಾಯಿ ದಂಡ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಕಿರು ಸಾಲ ವಸೂಲಾತಿ ಕಿರುಕುಳ ತಡೆಯಲು ಶಾಸನಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಕಳೆದ 19 ತಿಂಗಳಲ್ಲಿ ಗಂಭೀರ ಕಾನೂನು ವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ.

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಪೊಲೀಸರು ಅಪರಾಧಿಗಳನ್ನು ಶೀಘ್ರ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ಪ್ರಕರಣಗಳಲ್ಲೂ ಇಳಿಕೆ ಕಾಣುತ್ತಿದೆ. ಮೂಲಸೌಕರ್ಯ ಒದಗಿಸುವುದರಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

9 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

14 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

19 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 day ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 day ago