ಬಳ್ಳಾರಿ ಶ್ರೀಕೃಷ್ಣ ವಿಶ್ವವಿದ್ಯಾಲಯಲ್ಲಿ ಹಗರಣಗಳದ್ದೇ ಸದ್ದು.

ಬಳ್ಳಾರಿ.28.ಮಾರ್ಚ.25:-ಶ್ರೀಕೃಷ್ಣ ವಿಶ್ವವಿದ್ಯಾಲಯಲ್ಲಿ ಹಿಂದೆ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ ಅಕ್ರಮ, ಈಗ ಘಟಿಕೋತ್ಸವ ಪ್ರಮಾಣ ಪತ್ರ ಹಗರಣ ಹೀಗೆ ಅಕ್ರಮಗಳಿಂದಲೇ ಮುಜುಗರಕ್ಕೀಡಾಗುತ್ತಿರುವ ಬಳ್ಳಾರಿ ಶ್ರೀಕೃಷ್ಣ ವಿಜಯನಗರ ವಿಶ್ವವಿದ್ಯಾಲಯ ಅಭಿವೃದ್ಧಿ?

ಹಿಂದುಳಿದ ಜಿಲ್ಲೆ ಬಳ್ಳಾರಿ ಜನರ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಆಶಯ ಹೊತ್ತು ಆರಂಭಗೊಂಡ ವವಿಶ್ವವಿದ್ಯಾಲಯ ಹಗರಣಗಳಿಂದಲೇ ಸುದ್ದಿಯಾಗುತ್ತಿದೆ. ವಿಶ್ವವಿದ್ಯಾಲaಯಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗಾಗಿ ಕಳೆದ 2019ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಪರೀಕ್ಷೆಗಳನ್ನೂ ನಡೆಸಲಾಗಿತ್ತು. ಆದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆ ಪ್ರಕ್ರಿಯೆ ಸ್ಥಗಿತಗೊಂಡಿತು.ಶಿಕ್ಷಣದ ಗುಣಮಟ್ಟದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುವಲ್ಲಿ ದೂರ ಉಳಿದ ಆರೋಪ ಎದುರಿಸುತ್ತಲೇ ಇದೆ.

ಈವರೆಗೂ ಹುದ್ದೆಗಳ ನೇಮಕಾತಿ ಪ್ರಕ್ರಿಯಿಯೆ ಚಾಲನೆ ಸಿಕ್ಕಿಲ್ಲ. ಪರಿಣಾಮ ಕನ್ನಡ ವಿಭಾಗದಲ್ಲೂ ಕಾಯಂ ಬೋಧಕರಿಲ್ಲದೆ ಅತಿಥಿ ಬೋಧಕರನ್ನೇ ಆಶ್ರಯಿಸುವಂತಾಗಿದೆ. ಇನ್ನು, ಇತ್ತೀಚೆಗೆ ಬೆಳಕಿಗೆ ಬಂದ ನಕಲಿ ಘಟಿಕೋತ್ಸವ ಪ್ರಮಾಣಪತ್ರಗಳ ವಿತರಣೆ ಪ್ರಕರಣ ತೀವ್ರ ಮುಜುಗರಕ್ಕೀಡು ಮಾಡಿದೆ.

ಸಾವಿರಾರು ನಕಲಿ ಪ್ರಮಾಣಪತ್ರ ನೀಡಲಾಗಿದ್ದು, ಒಂದೂವರೆ ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಇನ್ನೂ ಪ್ರಮಾಣಪತ್ರಗಳ ಪರಿಶೀಲನೆ ಕಾರ್ಯ ಮುಂದುವರಿದಿದೆ. ಮಾ.28ರಂದು ಜರುಗುವ ಸಿಂಡಿಕೇಟ್ ಸಭೆಯಲ್ಲಿ ಅವ್ಯವಹಾರ ನಡೆಸಿರುವ ಆರೋಪಿಗಳ ವಿರುದ್ಧ ಕ್ರಮ ಜರುಗಿಸುವ ನಿರ್ಣಯಿಸುವ ಸಾಧ್ಯತೆಯಿದೆ.

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

2 hours ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

3 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

3 hours ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

4 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

4 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

4 hours ago