ರಾಜ್ಯದ ಐವರು ವರಿಷ್ಠ ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ಹಾಗೂ ಹೈಕಮಾಂಡ್ ಇಂದು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಉಚ್ಚಾಟಿಸಿದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ ಪದೇ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣಕ್ಕೆ ಈ ಬೃಹತ್ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಕೈಗೊಂಡಿದೆ.
ಇನ್ನು ಈ ಹಿಂದೆ ಇದೇ ಕಾರಣಕ್ಕೆ ಬಿಜೆಪಿ ಪಕ್ಷದ ಶಿಸ್ತು ಸಮಿತಿ ಉತ್ತರ ನೀಡುವಂತೆ ಬಸನಗೌಡ ಪಾಟೀಲ್ ಯತ್ನಾಳ್‌ಗೆ ನೋಟಿಸ್ ನೀಡಿತ್ತು. ಇದಕ್ಕೆ ಉತ್ತರ ನೀಡದ ಕಾರಣ ಬಿಜೆಪಿ ಶಿಸ್ತು ಸಮಿತಿ ಇದೀಗ ಉಚ್ಚಾಟನೆಯ ಛಾಟಿ ಬೀಸಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದಾಗಿನಿಂದಲೂ ಸತತವಾಗಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ.
ಯಡಿಯೂರಪ್ಪ ಬಣ ಈ ಕುರಿತು ಶಿಸ್ತು ಕ್ರಮ ಜರುಗಿಸುವಂತೆ ಹಲವಾರು ಬಾರಿ ಹೈಕಮಾಂಡ್‌ಗೆ ಪತ್ರ ಬರೆದು ಮನವಿಯನ್ನೂ ಸಹ ಮಾಡಿಕೊಂಡಿತ್ತು. ಇದೀಗ ಯಡಿಯೂರಪ್ಪ ಬೆಂಬಲಿಗರ ಆಶಯ ಈಡೇರಿದೆ.
ಇನ್ನು ಪಕ್ಷದಿಂದ ಉಚ್ಚಾಟನೆಯಾಗಿರುವ ರೆಬೆಲ್ ಶಾಸಕ ಯತ್ನಾಳ್ ಇನ್ನೆಷ್ಟು ರೆಬೆಲ್ ಆಗ್ತಾರೋ ಏನೋ..
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…