ಬಸವಕಲ್ಯಾಣದಲ್ಲಿ ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿ ಅವರನ್ನು ನಾಗರಿಕ ಸಮಿತಿ ವತಿಯಿಂದ ಅಭಿನಂದಿಸಲಾಯಿತು

ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿಗೆ ಅದ್ಧೂರಿ ಸನ್ಮಾನ

ಬೀದರ.11.ಜುಲೈ.25:- ಬಸವಕಲ್ಯಾಣದಲ್ಲಿ ಮಂಗಳವಾರ ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ
ತಾಳಂಪಳ್ಳಿ ಅವರನ್ನು ನಾಗರಿಕ ಸಮಿತಿ ವತಿಯಿಂದ ಅದ್ಧೂರಿಯಾಗಿ ಸನ್ಮಾನಿಸಲಾಯಿತು.ಬೃಹತ್ ಹೂಮಾಲೆ ಹಾಕಿ, ಪೇಟ ತೊಡಿಸಿ, ಶಾಲು ಹೊದಿಸಿ ಅಭಿನಂದಿಸಲಾಯಿತು.ಇದಕ್ಕೂ ಮುನ್ನ ಸಹಕಾರ ವಿಭಾಗದ ರಾಜ್ಯ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ
ಆಗಮಿಸಿದ ಪ್ರಯುಕ್ತ ಬೀದರ್‍ನ ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರು ಹಾಗೂಕಾರ್ಯಕರ್ತರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಬಳಿಕ ಬಸವಕಲ್ಯಾಣದ ಮಹಾದ್ವಾರದಿಂದ ಬಿಕೆಡಿಬಿ ಸಭಾಂಗಣದ ವರೆಗೆ ಬೃಹತ್ ರ್ಯಾಲಿಯಲ್ಲಿ ಕರೆ ತರಲಾಯಿತು.


ಬಿಕೆಡಿಬಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಹೃದಯಸ್ಪರ್ಶಿಯಾಗಿ ಸತ್ಕರಿಸಲಾಯಿತು.ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ, ರಾಜ್ಯ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅರವಿಂದಕುಮಾರ ಅರಳಿ, ಕೆ. ಪುಂಡಲೀಕರಾವ್, ಜಿಲ್ಲಾ ಪಂಚಯಿತಿ ಮಾಜಿ ಸದಸ್ಯ
ವೀರಣ್ಣ ಪಾಟೀಲ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಆರ್. ಪಾಟೀಲ, ಮುಖಂಡರಾದ ಅಬ್ದುಲ್ ಮನ್ನಾನ್ ಸೇಠ್, ಪಂಡಿತರಾವ್ ಚಿದ್ರಿ, ಗುಂಡುರೆಡ್ಡಿ ಕಮಲಾಪುರೆ, ಅರ್ಜುನ
ಕನಕ, ಕೇಶಪ್ಪ ಬಿರಾದಾರ, ವೈಜಿನಾಥ ಎಲಗುಂದಿ, ಲಕ್ಷ್ಮಣರಾವ್ ಬುಳ್ಳಾ, ಕೇಶವರಾವ್ ತಳಘಟಕರ್, ಗೌತಮ ಬಿ. ನಾರಾಯಣರಾವ್, ಮನೋಹರ ಮೈಸೆ, ಮಲ್ಲಿಕಾರ್ಜುನ ಪ್ರಭಾ, ಬಂಡೆಪ್ಪ ಮೇತ್ರೆ, ಚಂದ್ರಕಾಂತ ಮೇತ್ರೆ, ರಾಜಣ್ಣ ಚೌಧರಿ, ಬಸವಣಪ್ಪ ನಿಲೋಗಿ, ಗುರು ದುರ್ಗೆ,
ಸದಾನಂದ ಹಳ್ಳೆ, ವೀರಣ್ಣ ಪಾಟೀಲ, ಜ್ಞಾನೇಶ್ವರ ಸಿಂಧೆ, ಅಬ್ದುಲ್ ವಾಹಿದ್, ಸಾಗರ್
ಕವಿರಾಜ, ಯಾಹಿಯಾ ಪಾಶಾ  ಮತ್ತಿತರರು ಉಪಸ್ಥಿತರಿದ್ದರು.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

13 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

20 minutes ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

35 minutes ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

37 minutes ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

41 minutes ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

47 minutes ago