ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್, ಬಸವಣ್ಣರ ಮೂರ್ತಿ ವಿರೂಪ ಪ್ರಕರಣ ಟ್ರ್ಯಾಕ್ಟರ್ ಚಾಲಕ ಬಂಧಿಸಲಾಗಿದೆ

ಬೀದರ.21.ಜನವರಿ.25:-ದಾಡಗಿ ಕ್ರಾಸ್ ನಲ್ಲಿರುವ ಬಸವಣ್ಣರ ಮೂರ್ತಿಯ ಕೈ ಮುರಿದು ವಿರೂಪಗೊಳಿಸಿರುವ ಪ್ರಕರಣದಲ್ಲಿ ಟ್ರ್ಯಾಕ್ಟರ್ ಚಾಲಕನನ್ನು ಬಂಧಿಸಲಾಗಿದೆ ಎಂದು ಖಟಕ್ ಚಿಂಚೋಳಿ ಪೊಲೀಸ್ ಠಾಣೆಯ ಪಿಎಸ್‌ಐ ಸುದರ್ಶನ್ ರೆಡ್ಡಿ ಹೇಳಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಸವಣ್ಣರ ಮೂರ್ತಿಯ ಕ್ಯ ಮುರಿದು ವಿರೂಪಗೊಳಿಸಿರುವ ಪ್ರಕರಣ ಕೆ ಸಂಬಂಧಿತ ವ್ಯಕ್ತಿ ಅರೆಸ್ಟ್ ಮಧ್ಲಾಗಿದೆ.

ಜ.14 ರ ಮಧ್ಯರಾತ್ರಿ ಸುಮಾರು 3 ಗಂಟೆಗೆ ಈ ಘಟನೆ ನಡೆದಿದ್ದು, ಬಸವಣ್ಣನ ಮೂರ್ತಿ ಮೇಲೆ ಮತ್ತು ಅಕ್ಕ ಪಕ್ಕ ಕಬ್ಬಿನ ಗುರುತುಗಳು ಸಿಕ್ಕಿದ್ದರಿಂದ ಕಬ್ಬು ತುಂಬಿದ್ದ ವಾಹನವೇ ಹೊಡೆದಿರಬಹುದು ಎಂದು ಶಂಕಿಸಲಾಗಿತ್ತು.

ಅಂದಿನ ರಾತ್ರಿ ಆ ಹೊತ್ತಿಗೆ ಮಹಾರಾಷ್ಟ್ರ ಮೂಲದ ಕಬ್ಬು ತುಂಬಿದ ಟ್ರ್ಯಾಕ್ಟರ್ ಒಂದು ಘೋಡವಾಡಿ ಗ್ರಾಮದಿಂದ ಉದಗೀರ್ ಪಟ್ಟಣದ ಸಕ್ಕರೆ ಕಾರ್ಖಾನೆಗೆ ಹೋಗಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಅಂದು ರಾತ್ರಿ ಇಡೀ ಆ ಒಂದು ಕಬ್ಬಿನ ಟ್ರ್ಯಾಕ್ಟರ್ ಬಿಟ್ಟರೆ ಬೇರೆ ಯಾವುದೇ ಕಬ್ಬಿನ ವಾಹನ ಅಲ್ಲಿಂದ ಹೋಗಿರಲಿಲ್ಲ. ಜ.16 ರಂದೇ ಆ ಟ್ರ್ಯಾಕ್ಟರ್ ಮಾಲಕನನ್ನು ವಿಚಾರಿಸಿದಾಗ ತಪ್ಪೋಪ್ಪಿಕೊಂಡಿದ್ದಾನೆ.

ಟ್ರ್ಯಾಕ್ಟರ್ ಚಾಲಕ ಕೂಡ ಮಹಾರಾಷ್ಟ್ರ ಮೂಲದವನೇ ಆಗಿದ್ದಾನೆ ಎಂದು ತಿಳಿಸಿದ್ದಾರೆ.

ಈ ಘಟನೆ ವಿರುದ್ಧ ಬಸವ ಅನುಯಾಯಿಗಳು ಅಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಪ್ರಕರಣ ದಾಖಲಿಸಿ ತಪ್ಪಿತಸ್ಥರನ್ನು ಬಂಧಿಸಿ, ಬಸವಣ್ಣನವರ ನೂತನ ಪ್ರತಿಮೆ ಅನಾವರಣ ಮಾಡಲಾಗುವುದು ಎಂದು ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು.

ಈ ಕುರಿತು ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

15 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

31 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

41 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago