ಬಸವರಾಜ್ ಹೆಸರೂರ, ಹಾಲಯ್ಯ ಹುಡೆಜಾಲಿ, ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ

ಕೊಪ್ಪಳ.12.ಜುಲೈ.25:- ಬಸವರಾಜ್ ಹೆಸರೂರ, ಹಾಲಯ್ಯ ಹುಡೆಜಾಲಿ, ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ. ಕೊಪ್ಪಳ ಜಿಲ್ಲೆಯ ಮೂವರು ರಂಗಕರ್ಮಿಗಳಿಗೆ ಸಿಜಿಕೆ ರಂಗಪುರಸ್ಕಾರ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಹಿರಿಯ ರಂಗಕರ್ಮಿ ಗಳಾದ ಬಸವರಾಜ್ ಹೆಸರೂರು, ಹಾಲಯ್ಯ ಹುಡೇಜಾಲಿ ಹಾಗೂ ನಾಗರಾಜ್ ಇಂಗಳಗಿ ಇವರಿಗೆ ಸಿಜಿಕೆ ರಂಗ ಪುರಸ್ಕಾರಗಳನ್ನು ಘೋಷಣೆ ಮಾಡಲಾಗಿದೆ.


ಕೊಪ್ಪಳ ವಿಶ್ವವಿದ್ಯಾಲಯ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ಬೆಂಗಳೂರು, ಕವಿ ಸಮೂಹ, ಸೇವಾ & ಡೇವ್ಸ್. ಬಹುತ್ವ ಬಳಗ ಕೊಪ್ಪಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಸಿಜಿಕೆ ರಂಗದಿನಾಚರಣೆಯAದು ಸಿಜಿಕೆ ರಂಗಪುರಸ್ಕಾರ ಪ್ರಶಸ್ತಿಗಳನ್ನು ವಿತರಿಸಲಾಗುವುದು.
ಇದೇ ಜುಲೈ ೧೪, ೨೦೨೫ ಸೋಮವಾರ ಬೆಳಗ್ಗೆ ೧೧ ಗಂಟೆಗೆ ಕೊಪ್ಪಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಕರ್ನಾಟಕ ನಾಟಕ ಅಕಾಡೆಮಿ, ಬೆಂಗಳೂರು ಅಧ್ಯಕ್ಷರಾದ ಕೆ.ವಿ.ನಾಗರಾಜಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಪ್ಪಳ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ವಹಿಸಿಕೊಳ್ಳಲಿದ್ದಾರೆ.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಾಂದ್ ಪಾಷಾ ಕಿಲ್ಲೆದಾರ್ ಸದಸ್ಯರು, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ನಾರಾಯಣರಾವ್ ಕುಲಕರ್ಣಿ ಹಿರಿಯ ಪತ್ರಕರ್ತರು, ಕುಷ್ಟಗಿ. ಪ್ರೊ. ಕೆ.ವಿ.ಪ್ರಸಾದ ಕುಲಸಚಿವರು (ಪ್ರಭಾರ) ಕೊಪ್ಪಳ ವಿಶ್ವವಿದ್ಯಾಲಯ, ಸುರೇಶ್ ಡಿ. ಸಿಪಿಐ, ಕೊಪ್ಪಳ ಗ್ರಾಮೀಣ ಠಾಣೆ, ಕೊಪ್ಪಳ, ಡಾ. ಸುರೇಶ್ ಜಿ. ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೊಪ್ಪಳ , ತಿಮ್ಮಾರಡ್ಡಿ ಮೇಟಿ ಆಡಳಿತಾಧಿಕಾರಿಗಳು, ಕೊಪ್ಪಳ ವಿಶ್ವವಿದ್ಯಾಲಯ ಆಗಮಿಸಲಿದ್ದಾರೆ. ಆಸಕ್ತ ರಂಗ ಅಭಿಮಾನಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಸಂಘಟಕರಾದ ಸಿರಾಜ್ ಬಿಸರಳ್ಳಿ, ರಾಜಬಕ್ಷಿ ಹೆಚ್. ವಿ. ಪ್ರಕಟಣೆಯಲ್ಲಿ ಕೋರಿದ್ದಾರೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago