ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರ ವಿರುದ್ಧ ಆಕ್ರೋಶ*
ಕಮಲನಗರ ತಾಲ್ಲೂಕಿನ ಠಾಣಾಕುಶನೂರ ಗ್ರಾಮದಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ. ಚವ್ಹಾಣ ಅವರು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಕಾಮಗಾರಿಯ ಪ್ರಗತಿ ಕುರಿತು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದ ಅವರು, ಶಂಕುಸ್ಥಾಪನೆ ನೆರವೇರಿಸಿ ಮೂರು ವರ್ಷ ಕಳೆದರೂ ಯೋಜನೆ ಇನ್ನೂ ಪೂರ್ಣಗೊಂಡಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರ ಅತ್ಯವಶ್ಯಕತೆಯಾದ ಕುಡಿಯುವ ನೀರು ಪೂರೈಸಲು ಸಾಕಷ್ಟು ಪ್ರಯತ್ನಪಟ್ಟು ಯೋಜನೆ ತಂದಿದ್ದೇನೆ. ಕಾಮಗಾರಿ ವಿಳಂಬವಾಗಿರುವುದು ಅಸಹ್ಯಕರ ಎಂದು ಹೇಳಿದರು.
ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವ ಕೆಲಸಗಳಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ. ತಕ್ಷಣವೇ ಕಾಮಗಾರಿಗೆ ವೇಗ ನೀಡಿ, ಶೀಘ್ರ ಪೂರ್ಣಗೊಳಿಸಬೇಕು. ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ ನೀಡಿದರು.
ಇಲಾಖೆಯ ಅಧಿಕಾರಿಗಳು ಕೂಡ ಆಗಾಗ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಮೇಲೆ ನಿಗಾ ವಹಿಸಬೇಕು. ಶೀಘ್ರದಲ್ಲೇ ಯೋಜನೆ ಪೂರ್ಣಗೊಂಡು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ಮಾರುತಿ ರಾಠೋಡ, ಎಇ ಸುರೇಶ ಮೋರೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಗುಂಡಪ್ಪ ನಿಡೋದೆ, ಸುಭಾಷ ಲಕ್ಷ್ಮೀನಗರ, ಅರವಿಂದ, ಬಾಲಾಜಿ ವಾಗ್ಮಾರೆ ಹಾಗೂ ಇತರರು ಉಪಸ್ಥಿತರಿದ್ದರು.






Any questions related to ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಶಾಸಕ ಪ್ರಭು ಚವ್ಹಾಣ*?