ವಿಜಯಪುರ.14.ಫೆ.25:- ಭಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ರೌಡಿಗಳು ಆರೋಪಿಗಳು ಬಂಧಿಸಿದಾರೆ. ಭೀಮಾ ತೀರದ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಜಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.
ಸೇಡಿನ ಕೊಲೆ:
ವಿಜಯಪುರ ಎಸ್ ಪಿ ಲಕ್ಷ್ಮಣ ನಿಂಬರಗಿ ಹೇಳಿಕೆಯಂತೆ ಇದೊಂದು ಸೇಡಿನ ಕೊಲೆ ಎಂದು ಹೇಳಲಾಗಿದೆ, ಆಸ್ತಿ ವಿಚಾರವಾಗಿ ರವಿ ಹಾಗೂ ಭಾಗಪ್ಪ ನಡುವೆ ಈ ಹಿಂದೆ ಗಲಾಟೆ ನಡೆದಿತ್ತು. ಇದೇ ಕಾರಣಕ್ಕಾಗಿ ಭಾಗಪ್ಪನ ಶಿಷ್ಯರು ರವಿಯನ್ನು ಈ ಹಿಂದೆ ಹತ್ಯೆ ಮಾಡಿದ್ದರು ಎನ್ನಲಾಗಿದೆ. ರವಿ ಹತ್ಯೆಗೆ ಪ್ರತಿಕಾರವಾಗಿ ಆತನ ತಮ್ಮ ಪ್ರಕಾಶ ಮೇಲಿನಕೇರಿ ಬಾಗಪ್ಪನನ್ನ ಹತ್ಯೆಗೈದು ಸೇಡು ತಿರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಕೃತ್ಯಕ್ಕೆ ಬಳಸಿದ ಸೊತ್ತು ವಶ:
ಪಿಸ್ತೂಲ್ ಬಳಸಿ ಗುಂಡು ಹಾರಿಸಿ ಬಳಿಕ ಮಚ್ಚಿನಿಂದ ಹೊಡೆದು ಬಾಗಪ್ಪ ಹರಿಜನ ಹತ್ಯೆಗೈಯಲಾಗಿದ್ದು ಪೊಲೀಸರು ಆರೋಪಿಗಳಿಂದ ಪಿಸ್ತೂಲ್, ಮಚ್ಚು, ಸೇರಿದಂತೆ ಕೃತ್ಯಕ್ಕೆ ಬಳಸಿದ ಆಟೋ ಮತ್ತು ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…