ಬೀದರ.07.ಫೆಬ್ರುವರಿ.25:-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬಾಲಕಾರ್ಮಿಕ ನಿರ್ಮೂಲನ ಅಭಿಯಾನ ಹಾಗೂ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಅಂಗವಾಗಿ ಇಂದು ನಗರದ ಸವಿತಾ ಭವನದಲ್ಲಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನದ ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಸಂಘಟಿತ ಕಾರ್ಮಿಕರಿಗೆ ಮತ್ತು ಆಟೋ ಚಾಲಕರಿಗೆ ಗುರುತಿನ ಚೀಟಿ ವಿತರಿಸಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸವಲತ್ತುಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬೀದರ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ರೇಣುಕಾ ಜೋಪಾಟಿ, ಬೀದರ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರಾದ ಕೆ.ಸುವರ್ಣ, ಶಿವರಾಜ ಬಿರಾದಾರ ಸೇರಿದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಯಾದ ಆಕಾಶ ಸಜ್ಜನ ಹಾಗೂ ಕಾರ್ಮಿಕ ಇಲಾಖೆಯ ಸಿಬಂಧಿ ವರ್ಗದವರು ಹಾಗೂ ಆಟೋ ಚಾಲಕರು ಅಸಂಘಟಿತ ಕಾರ್ಮಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅರ್ಜುನ ಸಿತಾಳಗೇರ ಎಲ್ಲರನ್ನು ಸ್ವಾಗತಿಸಿ ನಿರೂಪಣೆ ಮಾಡಿದರು.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…