ಕೊಪ್ಪಳ.05.ಜುಲೈ .25:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಪ್ರಾಥಮಿಕ ಆರೋಗ್ಯ ಕೇಂದ್ರ, ಬೇವೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬೇವೂರು ಇವರ ಸಂಯುಕ್ತಾಶ್ರಯದಲ್ಲಿ ಜುಲೈ 04 ರಂದು ಕಾಲೇಜಿನ ಸಭಾಭವನದಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಬಾಲ್ಯವಿವಾಹ ನಮ್ಮ ಸಮಾಜದ ಒಂದು ಸವಾಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ ಯುವಜನತೆಗೆ ಮತ್ತು ಪಾಲಕರಿಗೆ ಅರಿವು ಮೂಡಿಸಬೇಕು.
ಬಾಲ್ಯವಿವಾಹ ಎಂದರೆ ಯಾವುದೇ 18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಅಥವಾ 21 ವರ್ಷದೊಳಗಿನ ಗಂಡುಮಕ್ಕಳಿಗೆ ಮದುವೆ ಮಾಡುವುದಕ್ಕೆ ಬಾಲ್ಯವಿವಾಹ ಎಂದು ಕರೆಯುತ್ತಾರೆ. ಬಾಲ್ಯವಿವಾಹಕ್ಕೆ ಕಾರಣಗಳೆಂದರೆ ಬಡತನ, ಅನಕ್ಷರತೆ, ಮೂಢನಂಬಿಕೆ, ಬಾಲ್ಯವಿವಾಹದ ದುಷ್ಪರಿಣಾಮದ ಬಗ್ಗೆ ಅರಿವು ಇಲ್ಲದೇ ಇರುವುದು, ರಕ್ತ ಸಂಬoಧವನ್ನು ಉಳಿಸಿಕೊಳ್ಳುವುದು, ಕುಟುಂಬ ಆಸ್ತಿಯನ್ನು ಉಳಿಸಿಕೊಳ್ಳುವುದು, ಪಾಲಕರು ಮದುವೆ ಮಾಡಿ ತಮ್ಮ ಜವಾಬ್ದಾರಿಯನ್ನು ಕಳೆದುಕೊಳ್ಳುವುದು, ಸಾಮೂಹಿಕ ವಿವಾಹದಲ್ಲಿ ಕಡಿಮೆ ಖರ್ಚು ಆಗುತ್ತದೆ ಎಂಬ ಭಾವನೆ, ವೃದ್ಧರು ಹಾಗೂ ಅನಾರೋಗ್ಯದ ಹಿರಿಯರ ಆಸೆ ಈಡೇರಿಸುವ ಉದ್ದೇಶದಿಂದ ಬಾಲ್ಯವಿವಾಹ ಮಾಡುತ್ತಾರೆ. ಬಾಲ್ಯವಿವಾಹ ಮಾಡುವುದರಿಂದ ಯುವಜನತೆಯ ಆರೋಗ್ಯ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಬಾಲ್ಯವಿವಾಹ ಮಾಡುವುದರಿಂದ ಇಬ್ಬರಿಗೂ ವಯಸ್ಸಿಗೆ ಮೀರಿದ ಜವಾಬ್ದಾರಿ ಹೊರಿಸಿದಂತಾಗುತ್ತದೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಹೆರಿಗೆ ಸಮಯದಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇರುತ್ತದೆ. ವಿಕಲಾಂಗ ಮಕ್ಕಳ ಜನನ ಉಂಟಾಗುತ್ತದೆ.
ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಬಲತ್ಕಾರಕ್ಕೆ ಒಳಗಾಗುತ್ತಾರೆ. ಲೈಂಗಿಕ ಖಾಯಿಲೆಗಳಿಂದ ಹೆಚ್.ಐ.ವಿ/ಏಡ್ಸ್ ರೋಗಕ್ಕೆ ಗುರಿಯಾಗುವ ಸಾಧ್ಯತೆ ಇರುತ್ತದೆ ಹಾಗೂ ರಕ್ತಹೀನತೆ ಉಂಟಾಗುತ್ತದೆ ಮತ್ತು ಕಡಿಮೆ ತೂಕದ ಮಗುವಿನ ಜನನವಾಗುವ ಸಾಧ್ಯತೆ ಇರುತ್ತದೆ.
ಶಿಶುಗಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಗ್ರಾಮಗಳಲ್ಲಿ/ವಾರ್ಡ್ಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತು, ನಿರಂತರವಾಗಿ ಪಾಲಕರಿಗೆ ಅರಿವು ಮೂಡಿಸಬೇಕು.
ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಮಾಡುವವರಿಗೆ ಮತ್ತು ಮಾಡಿಸುವವರಿಗೆ ದಂಡ ಮತ್ತು ಜೈಲುಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಕೊಪ್ಪಳವನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ವಿದ್ಯಾರ್ಥಿಗಳು ನಾಯಕತ್ವ ವಹಿಸಿಕೊಂಡು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ ಅವರು ಬಾಲ್ಯವಿವಾಹ ಕಂಡುಬoದಲ್ಲಿ 1098 ಸಂಖ್ಯೆಗೆ ಕರೆಮಾಡಿ ಬಾಲ್ಯ ವಿವಾಹ ನಿಯಂತ್ರಣ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಎಸ್.ಟಿ.ಎಸ್. ಕೃಷ್ಣಾಜೀ ಅವರು ಮಾತನಾಡಿ, ಕ್ಷಯರೋಗ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ವಿವರಿಸಿದರು. ಸಮುದಾಯ ಆರೋಗ್ಯಾಧಿಕಾರಿ ಮಂಜುಳಾ ಅವರು ಅಸಾಂಕ್ರಾಮಿಕ ರೋಗಗಳು, ಮಳೆಗಾಲದಲ್ಲಿ ಸೋಂಕಿತ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ, ಮೆದುಳುಜ್ವರ, ಆನೆಕಾಲುರೋಗ ಹರಡದಂತೆ, ತಾಯಿ ಮಕ್ಕಳ ಆರೋಗ್ಯ ರಕ್ಷಣೆ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಕುಷ್ಠರೋಗ ನಿರ್ಮೂಲನೆ ಕಾರ್ಯಕ್ರಮಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಇವರು ಬಾಲ್ಯ ವಿವಾಹ ತಡೆಗಟ್ಟುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ. ಇಲಾಖೆಗಳು ಜಾಗೃತಿ ಮೂಡಿಸಿದರೆ ಸಾಲದು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಬಲವಾದ ಕಾನೂನುಗಳಿಂದ ಮಾತ್ರ ಬಾಲ್ಯ ವಿವಾಹ ನಿಷೇಧ ಮಾಡಲು ಸಾಧ್ಯ, ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳು ಹದಿ-ಹರೆಯದವರಿಗೆ ಬಹಳಷ್ಟು ಉಪಯುಕ್ತವಾಗಿವೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹ ಉಪನ್ಯಾಸಕರಾದ ಹೆಚ್.ಎ ಹಿರೇಮಠ, ಅತಿಥಿ ಉಪನ್ಯಾಸಕರು, ಆಶಾ ಕಾರ್ಯಕರ್ತೆಯರಾದ ಅನ್ನಪೂರ್ಣ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೀದರ.06.ಜುಲೈ.25:- ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು…
ಬೀದರ.06.ಜುಲೈ.25:- ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ…
ಬೀದರ.06.ಜುಲೈ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರಿಂದು ಬೀದರ್ ತಾಲೂಕಿನ…
ಬೀದರ. ಜುಲೈ.25:- ಜೆಸ್ಕಾಂ, ಬೀದರ ವೃತ್ತ ವ್ಯಾಪ್ತಿಯ ಸಾರ್ವಜನಿಕ ವಿದ್ಯುತ್ ಗ್ರಾಹಕರಿಗೆ ಅನುಕೂಲವಾಗುವಂತೆ ಈಗಾಗಲೇ ಟೋಲ್ ಫ್ರೀ ನಂಬರ 1912…
ಬೀದರ.05.ಜುಲೈ.25:- ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ.) ಜನವಾಡಾ ಶಾಲೆಯಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಗಳಿಗೆ ಪ್ರವೇಶಕ್ಕೆ…