|

ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೀದರ.17.ಜೂನ್.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಭಾರತ ಸರ್ಕಾರವು “ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ” ಪ್ರಶಸ್ತಿಯನ್ನು ನೀಡಲು 18 ವರ್ಷದೊಳಗಿನ ಮಕ್ಕಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.

ಮಕ್ಕಳ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಾಂತ್ರಿಕತೆ, ಪರಿಸರ, ಕಲೆ ಮತ್ತು ಸಂಸ್ಕೃತಿ ಹಾಗೂ ಸoಶೋಧನೆಯಲ್ಲಿ (ಹೊಸ ಅವಿಷ್ಕಾರ) ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ 31-07-2025ಕ್ಕೆ ಅನ್ವಯವಾಗುವಂತೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ಎಲ್ಲಾ ಮಕ್ಕಳು ರಾಷ್ಟಿçÃಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ 2025ಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಅರ್ಹರು ಅನ್‌ಲೈನ್  https://awards.gov.in    ಮೂಲಕ ದಿನಾಂಕ: 31-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *