ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು.08.ಮಾರ್ಚ.25:- ರಾಜ್ಯದ್ 2025-26 ನೇ ಬಜೆಟ್ ಅಧಿವೇಶನ ಗೆ ಸಂಬಂಧಿತ ವಿರೋಧ ಪಕ್ಷ  ಟೀಕೆಗಳಿಗೆ ಮಾನ್ಯ ಸಚಿವ ಪ್ರಿಯಾಂಕ ಖರ್ಗೆ ಅವರು…. ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವು ನೀತಿಗಳು ಮತ್ತು ನಿರ್ಧಾರಗಳ ಕುರಿತು ಸರ್ಕಾರವನ್ನು ರಚನಾತ್ಮಕವಾಗಿ ಪ್ರಶ್ನಿಸುತ್ತವೆ.

ನಮ್ಮ ಸರ್ಕಾರದ ಬಜೆಟ್ ನಲ್ಲಿ ರಚನಾತ್ಮಕ ಟೀಕೆಗಳಿಗೆ ಅವಕಾಶವೇ ಇಲ್ಲದಿರುವಾಗ ರಾಜ್ಯದ ಬಿಜೆಪಿ ನಾಯಕರು ಹಲಾಲ್ ಬಜೆಟ್ ಎಂಬ ಟೊಳ್ಳು ಟೀಕೆಯ ಮೊರೆ ಹೋಗಿದ್ದಾರೆ. ಈ ಸ್ಟಿರಿಯೋಟೈಪ್ ಟೀಕೆಯ ಮೂಲಕ ಬಿಜೆಪಿಗರು ತಮ್ಮ ಬೌದ್ಧಿಕ ದಿವಾಳಿತನವನ್ನು ತಾವೇ ಪ್ರದರ್ಶನಕ್ಕೆ ಇಟ್ಟಿದ್ದಾರೆ. ಮೌಲ್ಯಯುತ ರಾಜಕಾರಣಕ್ಕೆ ತಿಲಾಂಜಲಿ ಇಟ್ಟಿದ್ದಾರೆ.

ಬಜೆಟ್ ಬಗ್ಗೆ ಅರ್ಥಪೂರ್ಣ ಚರ್ಚೆ ಮಾಡಲು ಸಾಮರ್ಥ್ಯವಿಲ್ಲದ ಬಿಜೆಪಿಗೆ #HalalBudget ಕೊನೆಯ ಅಸ್ತ್ರವಾಗಿದೆ !

ಹಿಂದೆ ಹೀಗೆಯೇ ಹಲಾಲ್, ಜಟ್ಕಾ ಕಟ್ ಎಂಬ ವಿಭಜನಾತ್ಮಕ ರಾಜಕೀಯ ಮಾಡಿದ್ದ ಬಿಜೆಪಿಯನ್ನು ರಾಜ್ಯದ ಜನತೆ ಜಟ್ಕಾ ಕಟ್ ಮಾಡಿ ಬಿಸಾಡಿದ್ದಾರೆ, ಅಲ್ಲದೆ, ಬಿಜೆಪಿ ಪಕ್ಷವು ಬಣ ಬಡಿದಾಟದ ಹಲಾಲ್ ಕಟ್ ನಿಂದಾಗಿ ಹಲವು ತುಂಡುಗಳಾಗಿದೆ!

ಬಜೆಟ್ ಬಗ್ಗೆ ರಚನಾತ್ಮಕ ಟೀಕೆಗಳನ್ನು ಎದುರಿಸಲು ನಾವು ಸದಾ ಸಿದ್ದರಿದ್ದೇವೆ, ಚರ್ಚೆಗೆ ಮುಕ್ತವಾಗಿದ್ದೇವೆ, ಉತ್ತರಿಸಲು ತಯಾರಿದ್ದೇವೆ, ಆದರೆ  @BJP4Karnataka ಚರ್ಚೆಗೆ ಸಿದ್ದವಿದೆಯೇ?

ಕರ್ನಾಟಕದ ಸಮಗ್ರ ಏಳಿಗೆಗೆ, ಆರ್ಥಿಕ ಸುಸ್ಥಿರತೆಗೆ, ಸಾಮಾಜಿಕ ಉನ್ನತಿಗೆ ನಮ್ಮ ಬಜೆಟ್ ಪೂರಕವಾಗಿರುವುದನ್ನು ಸಹಿಸದ ಬಿಜೆಪಿ ಸದಾ ಕನ್ನಡಿಗರನ್ನು ಅವಮಾನಿಸುವ ರಾಜಕಾರಣದಲ್ಲಿ ತೊಡಗಿರುವುದು ದುರಂತ.

ಅರ್ಥಪೂರ್ಣ ಹೊಣೆಗಾರಿಕೆ ಪ್ರದರ್ಶಿಸಬೇಕಾದ ವಿರೋಧ ಪಕ್ಷವು ನೈತಿಕ ಹಾಗೂ ಬೌದ್ಧಿಕ ದಿವಾಳಿತನ ಪ್ರದರ್ಶಿಸಿದಾಗ ರಾಜಕೀಯ ವ್ಯವಸ್ಥೆ ಮಾತ್ರವಲ್ಲ ಸಾಮಾಜಿಕ ಸ್ವಾಸ್ಥ್ಯವೂ ಕೆಡುತ್ತದೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

4 hours ago