01.ಜಿ.25. ಬೀದರ:- ಇಂದು ಬೀದರ ನಗರದಲ್ಲಿ ಗುತ್ತೇದಾರ ಸಚಿನ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಬೀದರ ಎನ್‌ಎಸ್‌ಯುಐ ಪ್ರತಿಭಟನೆ ಮಾಡಿದರು.ಇಂದು ಬೀದರ ನಗರದ ಅಂಬೇಡ್ಕರ್ ವೃತ್ತದಲ್ಲಿ ಎನ್‌ಎಸ್‌ಯುಐ ಪ್ರತಿಭಟನೆ ನಡೆಸಿ, ಭಾರತೀಯ ಜನತಾ ಪಕ್ಷದ ವಿರುದ್ಧ ಘೋಷಣೆಗಳು ಕೂಗುವ ಮೂಲಕ ಆಕ್ರೋಶ ವ್ಯಕ್ತಿಮಾಡಿದರು.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸಚಿನ್ ಮಲ್ಕಾಪುರೆ ಮಾತನಾಡಿ, ಕೋಮುವಾದಿ ಬಿಜೆಪಿ ಪಕ್ಷ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ.
ಬಿಜೆಪಿಯು ಮಹಿಳಾ ವಿರೋಧಿ ಮತ್ತು ಸಂವಿಧಾನ ವಿರೋಧಿಯಾದ ಮುನಿರತ್ನ ಅವರಿಗೆ ನೋಟಿಸ್ ಕೂಡ ನೀಡಲಿಲ್ಲ. ಆದರೆ ಇವಾಗ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಬೇಕಂತಲೇ ಪ್ರಿಯಾಂಕ್ ಖರ್ಗೆ ಅವರ ಹೆಸರು ಎಳೆದು ತರುತ್ತಿದೆ. ಮುಂದಿನ ದಿನಗಳಲ್ಲಿ ದಲಿತ ನಾಯಕನೊಬ್ಬ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಆತಂಕದಿಂದ ಬಿಜೆಪಿಯು ಪ್ರಿಯಾಂಕ್ ಖರ್ಗೆ ಅವರನ್ನು ಕುಗ್ಗಿಸಲು ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು.
ಸಚೀನ್ ಪಾಂಚಾಳ್ ಅವರ ಸಾವು ನಮ್ಮೆಲ್ಲರಿಗೂ ನೋವು ತಂದಿದೆ. ಈ ಪ್ರಕರಣದ ಸಮಗ್ರ ತನಿಖೆಯಾಗಿ ಸತ್ಯಾಸತ್ಯತೆ ಹೊರಬರಬೇಕು. ಈಗಾಗಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ. ಇದರ ನಡುವೆಯೂ ಬಿಜೆಪಿಯು ಸೇಡಿನ, ಜಾತಿಯ ರಾಜಕೀಯ ಮಾಡುತ್ತಿದೆ. ಬಿಜೆಪಿಯನ್ನು ಈ ರಾಜ್ಯದ ಜನ ಎಂದು ಕ್ಷೇಮಿಸುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷರಾದ ಮುಕೇಶ್ ಚಲ್ವಾ, ಭೀಮರಾವ್ ಮಾಲಗತ್ತಿ, ಪ್ರಚಾರ ಸಮಿತಿ ಅಧ್ಯಕ್ಷ ಸಂತೋಷಕುಮಾರ್ ಚಿಮಕೋಡೆ, ನಗರ ಅಧ್ಯಕ್ಷ ಸಿದ್ಧರ್ಥ ಭಾವಿದೊಡ್ಡಿ, ಎನ್‌ಎಸ್‌ಯುಐ ನ VTU ಅಧ್ಯಕ್ಷ ಟಿ ಕೈಫ್, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಥ್ವಿರಾಜ್ ಮುಧೋಳಕರ್, ಹಾದಿ ಪೈಲ್ವಾನ್, ಸತೀಶ್ ಚಾಲ್ಕೆ, ದೀಪಕ್ ಕಾಂಬ್ಳೆ, ಕಾರ್ಯಕರ್ತರಾದ ಸಚಿನ್, ಅನೀಲ ಚಿಮಕೋಡೆ ಹಾಗೂ ಜಾನ್ಸನ್ ಕೋಟಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಭಾರತ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಬೀದರ ನಗರಸದಲ್ಲಿ ಬಿಜೆಪಿಯ ವಿರುದ್ಧ ಘೋಷನೆ ಮತ್ತು ಕೂಗಿದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…