ಬಿಜೆಪಿಯ ಶಾಸಕರ ಕ್ಷೇತ್ರಗಳಿಗೆ ಅನ್ಯಾಯವಾಗ್ತಿದೆ.ಶಾಸಕ ಪ್ರಭು ಚವ್ಹಾಣ.!

ಔರಾದ್.12.ಜನವರಿ.25:-ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಬಿಜೆಪಿಯ ಶಾಸಕನಾಗಿರುವ ನನ್ನ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ಅಡ್ಡಗಾಲು ಹಾಕ್ತಿದೆ.  ಅಭಿವೃದ್ದಿ ಕಾಮಗಾರಿ ಆಗುತ್ತಿಲ್ಲ. ಬಿಜೆಪಿ ಸರಕಾರ ರೋಪಿಸಿದ್ ಯೋಜನೇ ಕಾಮಗಾರಿ ಕಾರಂಜಾ ಡ್ಯಾಂ ದಿಂದ ಔರಾದ್‌ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯ 84 ಕೋಟಿ ರು. ಯೋಜನೆ ಟೆಂಡರ್‌ ಆಗಿ ಎರಡು ವರ್ಷವಾದರೂ ಕಾಮಗಾರಿ ಆರಂಭವಾಗಿಲ್ಲ.

ಹಾಗೋ ಕೆರೆ ತುಂಬಿಸುವ 560 ಕೋಟಿ ರು. ಕಾಮಗಾರಿ ಮರು ಟೆಂಡರ್‌ ಮಾಡಲಾಗಿದೆ ಅನಗತ್ಯ ವಿಳಂಬವನ್ನು ಇನ್ಮುಂದೆ ಸಹಿಸಲ್ಲ ಎಂದು ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ ವ್ಯಕ್ತಪಡಿಸಿದರು. ಅವರು ಕಾರಂಜಾ ಜಲಾಶಯದಿಂದ ಔರಾದ್‌ ಪಟ್ಟಣ ಹಾಗೂ ಮತ್ತಿತರ ಗ್ರಾಮಗಳಿಗೆ ನೀರು ಪೂರೈಸುವ ಕಾಮಗಾರಿಯ ಕುರಿತಂತೆ ಭಾಲ್ಕಿ ತಾಲೂಕಿನ ಹಲಬರ್ಗಾ ಸಮೀಪದ ತೇಗಂಪೂರ ಗ್ರಾಮದ ಸ್ಥಳ ಪರಿಶೀಲನೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಸಮಧಾನ ಹೊರಹಾಕಿದರು.

ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಕಾರಂಜಾ ಜಲಾಶಯದಿಂದ ಪೈಪ್‌ ಲೈನ್‌ ಮೂಲಕ ಔರಾದ್‌ ಹಾಗೂ ಕಮಲನಗರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವುದು ಅಲ್ಲದೆ ಈ ನಡುವೆ ಬರುವ 6 ಗ್ರಾಮಗಳಿಗೂ ಕುಡಿಯುವ ನೀರು ಪೋರೈಸಲು ಅಮೃತ ಯೋಜನೆಯ 2.0 ಅಡಿಯಲ್ಲಿ ಸರ್ಕಾರ ಒಟ್ಟು 84.82 ಕೋಟಿ ರು.

ವೆಚ್ಚದ ಯೋಜನೆಯನ್ನು 2022 ರಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಮಂಜೂರಾತಿ ಪಡೆದು ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದೆ. ಆದರೆ ಗುತ್ತಿಗೆದಾರ ಇಲ್ಲಿಯವರೆಗೆ ಕಾಮಗಾರಿ ಆರಂಭಿಸುವುದನ್ನು ಬಿಟ್ಟು ಅನಗತ್ಯ ವಿಳಂಬ ಮಾಡ್ತಿರುವುದು ಕಾಂಗ್ರೆಸ್ಸಿಗರ ಹಸ್ತಕ್ಷೇಪದ ಅನುಮಾನ ಹುಟ್ಟಿಸುತ್ತಿದೆ ಎಂದು ಶಾಸಕ ಪ್ರಭು ಚವ್ಹಾಣ್‌ ಆಕ್ರೋಶ ವ್ಯಕ್ತಪಡಿಸಿದರು.

ಬೇಸಿಗೆಯಲ್ಲಿ ಜನರಿಗೆ ನೀರಿನ ಸಮಸ್ಯೆ ಆಗ್ತದೆ. ತಕ್ಷಣ ಭೂ ಸ್ವಾಧೀನ ಕಾರ್ಯ ಮಾಡುವುದು, ಅಲ್ಲಲ್ಲಿ ಬರುವ ಅರಣ್ಯ ಇಲಾಖೆಯ ಅನುಮತಿಗಾಗಿ ಅನಗತ್ಯ ವಿಳಂಬ ಮಾಡಲಾಗ್ತಿದೆ. ಇದೇ ರೀತಿ ವಿಳಂಬ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ್ರೆ ಮುಂಬರುವ ದಿನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಶಾಸಕ ಪ್ರಭು ಚವ್ಹಾಣ್‌ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಗಮನಕ್ಕೂ ಸಾಕಷ್ಟು ಬಾರಿ ತರಲಾಗಿದೆ ಆದರೆ ಅದಕ್ಕೆ ಯಾವುದೇ ಪ್ರತಿಫಲ ಸಿಕ್ಕಿಲ್ಲ.

ಬಿಜೆಪಿಯ ಶಾಸಕರ ಕ್ಷೇತ್ರಗಳಿಗೆ ಅನ್ಯಾಯವಾಗ್ತಿದೆ. ಇನ್ನು ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು ಕಾಮಗಾರಿ ಆರಂಭಕ್ಕೆ ಬಿಡುತ್ತಿಲ್ಲವೇ ಎಂಬ ಅನುಮಾನ ಮೂಡುತ್ತಿದೆ ಎಂದು ಪ್ರಭು ಚವ್ಹಾಣ್‌ ಆರೋಪಿಸಿದರು.

ಮದ್ಯ ಮಾರಾಟ ನಿಲ್ಲಿಸಲು ಆಗ್ರಹ: ಅಕ್ರಮ ಮದ್ಯದಂಗಡಿಗಳು ತಲೆ ಎತ್ತಿದ್ದು, ಇದರಿಂದ ಪತಿ, ಮಕ್ಕಳು ಸೇರಿದಂತೆ ಬಹುತೇಕರು ಕುಡಿತಕ್ಕೆ ದಾಸರಾಗುತ್ತಿದ್ದು, ತಕ್ಷಣವೇ ಮದ್ಯದಂಗಡಿಗಳನ್ನು ಬಂದ್‌ ಮಾಡಿಸುವಂತೆ ಶಾಸಕ ಪ್ರಭು ಚವ್ಹಾಣ್‌ ಎದುರು ಮಹಿಳೆಯರ ಗುಂಪು ಅಂಗಲಾಚಿತು.

ತಾಲೂಕಿನ ಹಕ್ಯಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಪ್ರಭು ಚವ್ಹಾಣ್‌ ಅವರು ಸೋಮವಾರ ಗ್ರಾಮ ಸಂಚಾರ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 15ಕ್ಕೂ ಅಧಿಕ ಮಹಿಳೆಯರು ಗ್ರಾಮದಲ್ಲಿ ಮದ್ಯದ ಹಾವಳಿ ತಡೆಯುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರ ಮೇಲೆ ಅಭಿವೃದ್ದಿ ಅಧ್ತಿಲ್ಲ ಎಂದು ಆರೋಪಿಸಿದರು.

prajaprabhat

Recent Posts

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

16 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

26 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

2 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

2 hours ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

3 hours ago