ಹುಬ್ಬಳ್ಳಿ.07.ಜನವರಿ.26: ಇಂದು ಕಾಂಗ್ರೆಸ್ ಕಾರ್ಪೋರೇಟರ್ ಕೊಟ್ಟ ದೂರಿನ ಆಧಾರದ ಮೇರೆಗೆ ಬಿಜೆಪಿ ಕಾರ್ಯಕರ್ತೆಯನ್ನು ಹಿಡಿದ ಪೊಲೀಸರು ಆಕೆಯನ್ನು ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿರುವ ಘಟನೆ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಇತ್ತೀಚಿಗಷ್ಟೇ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಗಲಾಟೆಯಾಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ರಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ ನಡೆದಿತ್ತು.
ಮತದಾರರ ಪಟ್ಟಿ ಪರಿಷ್ಕರಣೆ ವೇಳೆ, ಅಧಿಕಾರಿಗಳ ಜೊತೆ ತೆರಳಿದ್ದ ಸುಜತಾ ಹಂಡಿ ಈ ವೇಳೆ ತಗಾದೆ ತೆಗೆದು ಗಲಾಟೆ ಮಾಡಿದ್ದರೆನ್ನಲಾಗಿತ್ತು. ಈ ಹಳೆಯ ಪ್ರಕರಣ ಮುಂದಿಟ್ಟಕೊಂಡು ಕಾಂಗ್ರೆಸ್ ಕಾರ್ಪೋರೆಟ್ ಹಾಗು ಬೆಂಬಲಿಗರ ಗಲಾಟೆ ಮಾಡಿಕೊಂಡಿದ್ದರು.
ಸುಜತಾ ಹಂಡಿ ವಿರುದ್ಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರು. ಗಲಾಟೆ ವೇಳೆ ದೂರು ಪ್ರತಿದೂರು ದಾಖಲಾಗಿತ್ತು. ಕಾಂಗ್ರೆಸ್ ಕಾರ್ಪೋರೆಟ್ ನೀಡಿದ ದೂರಿನ ಮೇಲೆ ಬಂಧಿಸಿದ ಪೊಲೀಸರು ಬಂಧನ ವೇಳೆ ಪ್ರತಿರೋಧ ತೋರಿ ಚೀರಾಟ ನಡೆಸಿದ್ದಕ್ಕೆ ಆಕೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆಂದು ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತೆ ವಿರುದ್ಧ 307 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಸುಜಾತಾ SIR- BLO ಗಳನ್ನು ಕರೆತಂದು ನಮ್ಮ ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಿಸಿದ್ದಾರೆನ್ನಲಾಗಿದ್ದು, ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆಯೆನ್ನಲಾಗಿದೆ.
ಈ ಕುರಿತು ಹುಬ್ಬಳ್ಳಿ ಧಾರವಾಡ ಜಿಲ್ಲೆಯ ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿ ಆಕೆಯೇ ಸ್ವತಃ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ .ನಮ್ಮ ಪೊಲೀಸರು ಇಂಥಾ ಕೆಲಸ ಮಾಡಿಲ್ಲ ಎಂದು ಹೇಳಿರುವುದು ಮತ್ತಷ್ಟು ಆಕ್ರೋಶ ಭುಗಿಲೇಳಲು ಕಾರಣವಾಗಿದೆ.
ಈಕೆಯ ವಿರುದ್ದ ಬೇರೆ ಬೇರೆ ಆರೋಪಗಳಡಿಯಲ್ಲಿ 9 ಪ್ರಕರಣ ದಾಖಲಿಸಿದ್ದಾರೆ. ರಾಜಕೀಯ ವೈಷಮ್ಯದಿಂದ ಸುಜಾತಾಳ ವಿರುದ್ದ ಈ ರೀತಿಯ ಹಲ್ಲೆ ನಡೆದಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.






Any questions related to ಬಿಜೆಪಿ ಕಾರ್ಯಕರ್ತೆಯನ್ನು ಬಟ್ಟೆ ಬಿಚ್ಚಿ ಥಳಿಸಿದ ಪೊಲೀಸರು-ವಿಡಿಯೋ ವೈರಲ್!?