ಬಿತ್ತನೆ ಬೀಜ್, ಗೊಬ್ಬರ ಸಕಾಲದಲ್ಲಿ ರೈತರಿಗೆ ವಿತರಣೆ ಮಾಡಿ-ಸಚಿವ ರಹೀಂ ಖಾನ್

ಬೀದರ.27.ಮೇ.25:- ರೈತರಿಗೆ ಸರ್ಕಾರದಿಂದ ಸಿಗುವ ಬಿತ್ತನೆಬೀಜ, ಕೃಷಿಭಾಗ್ಯ ಯೋಜನೆ, ಸಾವಯವ ಕೃಷಿ ಹಾಗೂ ಇತರೆ ಯೋಜನೆಗಳ ಲಾಭವನ್ನು ಸರ್ಕಾರದ ಸಹಾಯಧನದಲ್ಲಿ ಪಡೆಯಲು ಸಕಾಲದಲ್ಲಿ ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ವಿತರಣೆ ಮಾಡಬೇಕೆಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅಧಿಕಾರಿಯವರಿಗೆಸೂಚಿಸಿದರು.


ಅವರು ಮಂಗಳವಾರ ಜಿಲ್ಲಾ ಪಂಚಾಯತ, ಕೃಷಿ ಇಲಾಖೆ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಬೀದರ ಸಂಯುಕ್ತಾಶ್ರಯದಲ್ಲಿ ಚಾಂಬೋಳಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿತ್ತನೆ ಬೀಜ ವಿತರಣೆ ಹಾಗೂ ಬೀಜ ಉಪಚಾರ ಹಾಗೂ ಕೀಟನಾಸಕ ಸುರಕ್ಷಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಬೀದರ ಜಂಟಿ ಕೃಷಿ ನಿರ್ದೇಶಕರಾದ ಜಿಯಾವುಲ್ಲಾ ಕೆ. ಅವರು ಪಾಸ್ತಾವಿಕ ಮಾತನಾಡಿ, ಸೋಯಾ ಮತ್ತು ಇತರೆ ಬೀಜಗಳು ದಾಸ್ತಾನು ಮಾಡಿರುವ 29 ಬೀಜ ವಿತರಣಾ ಕೇಂದ್ರಗಳ ಬಗ್ಗೆ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಾಹಿತಿ ನೀಡಿ ದಿನಾಂಕವಾರು ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ ಎಂದರು.


ಸಕಾಲದಲ್ಲಿ ಮಳೆಯಾಗಿರುವುದರಿಂದ ಉದ್ದು, ಹೆಸರು ಮತ್ತು ಮಿಶ್ರ ಬೆಳೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಾಗೂ ಡಿಎಪಿ ಬದಲಿಗೆ ಸಂಯುಕ್ತ ಗೊಬ್ಬರಗಳನ್ನು ಬಳಸಲು ರೈತರಿಗೆ ಸಲಹೆ ನೀಡಿದರು.


ಕೃಷಿ ಸಂಶೋಧನಾ ಕೇಂದ್ರದ ಕೃಷಿ ವಿಜ್ಞಾನಿಗಳಾದ ಡಾ.ಮಲ್ಲಿಕಾರ್ಜುನ ಲಿಂಗದಳ್ಳಿ ಅವರು ಸಮಗ್ರ ಕೃಷಿ ಪದ್ಧತಿ ಹಾಗೂ ಬಿತ್ತನೆ ಬೀಜ ಉಪಚಾರದ ಕುರಿತು ತರಬೇತಿ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಸಿದ್ರಾಮಯ್ಯ ಸ್ವಾಮಿ, ಬೀದರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ.ಆರ್.ಎಲ್. ಜಾಧವ ಚಾಂಬೋಳ್ ಗ್ರಾಮ ಪಂಚಾಯತ ಅಧ್ಯಕ್ಷರಾದ ಸುರೇಖಾ ಅರ್ಜುನ ಕೋಳಿ, ಉಪಾಧ್ಯಕ್ಷರಾದ ದೌಲತರಾವ, ಚಾಂಬೋಳ್ ಪಿಕೆಪಿಎಸ್ ಅಧ್ಯಕ್ಷರಾದ ಸುನಿಲ್ ಪಾಟೀಲ್, ಜಿಲ್ಲಾ ಕೃಷಿಕ ಸಮಾಜದ ಸದಸ್ಯರಾದ ಸಂಜು ಪಾಟೀಲ್ ಕನ್ನಳ್ಳಿ, ತಾಲ್ಲೂಕ ಪಂಚಾಯತಿ ಸದಸ್ಯರಾದ ರಾಮರಾವ ಪಾಟೀಲ್, ನಾಗೇಂದ್ರ ಪಾಟೀಲ್, ಬಂಡೆಪ್ಪಾ ಜ್ಯಾಂತೆ, ಧನರಾಜ ಪಾಟೀಲ್, ಉಮೇಸ ಮೊಟ್ಟೆ, ಚಂದ್ರಕಾoತ ಹಿಪ್ಪಳಗಾಂವ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

6 minutes ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

1 hour ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

1 hour ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

2 hours ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

7 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

13 hours ago