ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರ ಪರ, ಶಾಸಕ ಪ್ರಭು ಚೌವ್ಹಾಣ್ ಬ್ಯಾಟಿಂಗ್

ಬೀದರ.31.ಜನವರಿ.25: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ರೆಬಲ್‌ ಟೀಂ ಸಿಡಿದೆದ್ದಿದೆ. ಈ ಮಧ್ಯೆ ಔರಂಗ ಬಾದ್‌ ಶಾಸಕ ಪ್ರಭು ಚೌಹಾಣ್‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪರವಾಗಿ ಬ್ಯಾಟ್‌ ಬೀಸಿದ್ದಾರೆ. ಬೀದರ್‌ ಜಿಲ್ಲೆಯ ಔರಾದ ತಾಲ್ಲೂಕಿನ ವಡಂಗಾವ್‌ ಗ್ರಾಮದಲ್ಲಿ ಮಾತನಾಡಿದ ಅವರು, ಪಾರ್ಟಿ ದೊಡ್ಡದಾಗಿದೆ, ಮನೆಯಲ್ಲಿ ಜಗಳ ಆದಂತೆ ಜಗಳ ಆಗ್ತಿದೆ ಒಪ್ಪುತ್ತೇನೆ.

ಆದರೆ ಅವರ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ, ಇದು ಅವರಿಗೆ ಗೊತ್ತಿಲ್ಲ. ವಿಜಯೇಂದ್ರ ಅಧ್ಯಕ್ಷರಾದ್ಮೇಲೆ ಪಕ್ಷ ಗಟ್ಟಿಯಾಗಿದೆ. ಎಲ್ಲರೂ ನಮ್ಮ ನಾಯಕರೇ ಈ ರೀತಿ ಮಾಡಬಾರದು. ನಮಗೆ ಸಿಟ್ಟು ಬರ್ತಿದೆ ಅಂತಾ ಭಿನ್ನಮತೀಯರ ವಿರುದ್ಧ ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಯಿಯಂತೆ ಪಕ್ಷವನ್ನು ಕಾಣುತ್ತೇವೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾದ್ಮೇಲೆ ರಾಜ್ಯದಲ್ಲಿ ಪಕ್ಷಕ್ಕೆ ಚೈತನ್ಯ ಬಂದಿದೆ. ಸರ್ಕಾರಕ್ಕೆ ಭಯ ಉಂಟಾಗಿದೆ, ವಿಜಯೇಂದ್ರ ಯುವಕರಿಗೆ ಪ್ರೋತ್ಸಾಹ ಕೊಡ್ತಿದ್ದಾರೆ. ಇದನ್ನ ನಮ್ಮ ನಾಯಕರು ಸರಿಪಡಿಸುತ್ತಿಲ್ಲ, ನಮಗೆ ನೋವಿದೆ. ನಾನು ಯಾರ ಹೆಸರು ಹೇಳಲ್ಲ, ನಮ್ಮ ನಾಯಕರು ಸರಿಪಡಿಸಬೇಕು.

ಯಡಿಯೂರಪ್ಪ, ಅನಂತಕುಮಾರ್, ಪ್ರಲ್ಹಾದ್ ಜೋಶಿಯವರು ಪಕ್ಷ ಕಟ್ಟಿದ್ದಾರೆ. ಸುಧಾಕರ್ ಬಂದು ನಾಲ್ಕು ವರ್ಷವಾಯ್ತು. ಇಂತಹ ಆರೋಪಗಳನ್ನ ಮಾಡಬಾರದು, ಅದರಲ್ಲಿ ಹುರುಳಿಲ್ಲ. ಮತ್ತು ಇತರರು.

ವಿಜಯೇಂದ್ರ ಅವರಿಂದಲೇ ಸುಧಾಕರ್ ಎಂಪಿ ಆಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ್ರು. ವಿಜಯೇಂದ್ರ, ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷ ಟಿಕೆಟ್ ಕೊಟ್ಟಿದೆ ಎಂಪಿ ಆಗಿದ್ದಾರೆ ಅಂತಾ ವಿಜಯೇಂದ್ರ ಪರವಾಗಿ ಮಾತನಾಡಿದ್ದಾರೆ.

prajaprabhat

Recent Posts

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

49 minutes ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

55 minutes ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

1 hour ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

7 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

13 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

13 hours ago