ಬೀದರ.14.ಫೆಬ್ರುವರಿ.25:-ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಬೀದರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮಿಣ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳುರು ಹಾಗೂ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಛೇರಿ ಬೀದರ ಇವರ ಸಹಯೋಗದೊಂದಿಗೆ ಫೆಬ್ರುವರಿ.15 ರಂದು ಬೆಳಿಗ್ಗೆ 9.30 ರಿಂದ ಸಂಜೆ 4 ರವರೆಗೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಆವರಣ ಮನ್ನಳ್ಳಿ ರಸ್ತೆ ಬೀದರದಲ್ಲಿ ಡಿಡಿಯು-ಜಿಕೆವೈ ಮತ್ತು ಸಂಕಲ್ಪ ಯೋಜನೆಯಡಿ ಉದ್ಯೋಗ ಮೇಳ-2025 ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಾಡಲಿದ್ದಾರೆ.
ಕಾರ್ಯಕ್ರಮದ ಘನ ಉಪಸ್ಥಿತಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್ ವಹಿಸಲಿದ್ದಾರೆ.
ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸಂಸದರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ ಹಾಗೂ ವಿಧನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಾ ನಾಯಕ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ, ಬೀದರ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಎಲೆಕ್ಟ್ರಾನಿಕ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಏಕ್‍ರೂಪ್ ಕೌರ್, ಸರ್ಕಾರದ ಕಾರ್ಯದರ್ಶಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಂದೀಪ್ ಡಿ., ಬೆಂಗಳುರು ರಾಷ್ಟ್ರೀಯ ಜೀವನೋಪಾಯ ಅಬಿಯಾನನದ ಅಭಿಯಾನ ನಿರ್ದೇಶಕರಾದ ಪಿ.ಐ.ಶ್ರೀವಿದ್ಯಾ, ಬೆಂಗಳುರು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಆಯುಕ್ತರಾದ ರಾಗಪ್ರೀಯಾ ಅವರುಗಳು ಭಾಗವಹಿಸಲಿದ್ದಾರೆ.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…