ಬೀದರ|ಫೆ.19 ರಂದು ಲೋಕಾಯುಕ್ತ ಕುಂದು ಕೊರತೆ ಸಭೆ.!


ಬೀದರ.17.ಫೆಬ್ರುವರಿ.25: ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಹುಮನಾಬಾದ ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಫೆಬ್ರುವರಿ.19 ರಂದು ಬೆಳಿಗ್ಗೆ 11.30 ಗಂಟೆಗೆ ಹುಮನಾಬಾದ ತಹಸೀಲ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಭವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ. 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಎಸ್‍ಪಿ ರವರ ಮೊ.ಸಂ-9364062519, ಡಿಎಸ್‍ಪಿ ರವರ ಮೊ.ಸಂ.9364062571,  ಪಿಐ-1 ರವರ ಮೊ.ಸಂ..9364062672, ಪಿಐ-2 ರವರ ಮೊ.ಸಂ.9364062673, ಪಿಐ-3 ರವರ ಮೊ.ಸಂ.9364062674 ಮತ್ತು ಪಿಐ-4 ಅವರ ಮೊ.ಸಂ.9364062675 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

4 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

8 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

14 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

14 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

15 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

15 hours ago